ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಹತ್ವದ ಅಪ್ಡೇಟ್

Updated on: Oct 22, 2026 | 10:36 PM

ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಅಕ್ಟೋಬರ್ 22) ದೆಹಲಿಗೆ ತೆರಳಿದ್ದು, ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಹಲವು ಯೋಜನೆಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಬಾಕಿ ಇರುವ ಸಂಪುಟ ಭರ್ತಿ ಹಾಗೂ ನಿಗಮ ಮಂಡಳಿ ನೇಮಕ ವಿಚಾರ ಮಾತುಕತೆ ಮಾಡಿದ್ದಾರೆ. ಅಲ್ಲದೇ ನಿಗಮ ಮಂಡಳಿ ನೇಮಕ ಸಹ ಫೈನಲ್ ಆಗಿದ್ದು, ಪಟ್ಟಿಯನ್ನು ಡಿಕೆ ಶಿವಕುಮಾರ್ ಅವರಿಗೆ ನೀಡಿದ್ದಾರೆ. ಆದ್ರೆ, ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪಟ್ಟಿಯನ್ನು ಪ್ರಕಟಿಸಿಲ್ಲ. ಈ ಬಗ್ಗೆ ಸ್ವತಃ ಡಿಕೆಶಿ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.

ನವದೆಹಲಿ, ಅಕ್ಟೋಬರ್ 22: ಸಿಎಂ ಡಿಕೆ ಶಿವಕುಮಾರ್ ಅವರು ಇಂದು (ಅಕ್ಟೋಬರ್ 22) ದೆಹಲಿಗೆ ತೆರಳಿದ್ದು, ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯದ ಹಲವು ಯೋಜನೆಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಇದೇ ವೇಳೆ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದು, ಬಾಕಿ ಇರುವ ಸಂಪುಟ ಭರ್ತಿ ಹಾಗೂ ನಿಗಮ ಮಂಡಳಿ ನೇಮಕ ವಿಚಾರ ಮಾತುಕತೆ ಮಾಡಿದ್ದಾರೆ. ಅಲ್ಲದೇ ನಿಗಮ ಮಂಡಳಿ ನೇಮಕ ಸಹ ಫೈನಲ್ ಆಗಿದ್ದು, ಪಟ್ಟಿಯನ್ನು ಡಿಕೆ ಶಿವಕುಮಾರ್ ಅವರಿಗೆ ನೀಡಿದ್ದಾರೆ. ಆದ್ರೆ, ವಿಧಾನಪರಿಷತ್ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪಟ್ಟಿಯನ್ನು ಪ್ರಕಟಿಸಿಲ್ಲ. ಈ ಬಗ್ಗೆ ಸ್ವತಃ ಡಿಕೆಶಿ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.

ಹೈಕಮಾಂಡ್ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ನವದೆಹಲಿಗೆ ಬಂದ ಮೇಲೆ ಹೈಕಮಾಂಡ್ ಭೇಟಿ ಸಹಜ. ನಿಗಮ ಮಂಡಳಿ ನೇಮಕ ವಿಚಾರ ಚರ್ಚೆ ಮಾಡಿದ್ದೇವೆ ಸಂಪುಟ ಭರ್ತಿ ಬಗ್ಗೆಯೂ ವರಿಷ್ಠರ ಗಮನಕ್ಕೆ ತಂದಿದ್ದೇನೆ. ಹೊಸಬರಿಗೆ ಅವಕಾಶ ಕೊಡಬೇಕು ಎಂದು ಹೇಳಿದ್ದೇನೆ. ಇನ್ನು ನಿಗಮ ಮಂಡಳಿ ಡೈರೆಕ್ಟರ್ ಹೆಸರು ಫೈನಲ್​​ ಮಾಡಿ ವರಿಷ್ಠರು ಕೊಟ್ಟಿದ್ದಾರೆ. ಚುನಾವಣಾ ನೀತಿ ಸಂಹಿತೆ ಇರುವ ಕಾರಣ ಪ್ರಕಟಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More