ಕರ್ತವ್ಯ ನಿರತ ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌

Edited By:

Updated on: Apr 03, 2026 | 8:47 PM

ಬಳ್ಳಾರಿಯಲ್ಲಿ ಕಾರ್ಪೊರೇಟರ್ ವಿ. ಕುಬೇರ್ ಕರ್ತವ್ಯ ನಿರತ ಎಇಇ ವೀರೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಶಾಸಕ ನಾರಾ ಭರತ್ ರೆಡ್ಡಿ ಅವರ ಸಲಾಂ ಬಳ್ಳಾರಿ ಕಾರ್ಯಕ್ರಮದ ವೇಳೆ ನಡೆದ ಈ ಘಟನೆಯಿಂದ ವೀರೇಶ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕೃತ್ಯವನ್ನು ಮಹಾನಗರಪಾಲಿಕೆ ಆಯುಕ್ತರು ತೀವ್ರವಾಗಿ ಖಂಡಿಸಿದ್ದು, ಇದು ಸರ್ಕಾರಿ ನೌಕರರ ನೈತಿಕ ಸ್ಥೈರ್ಯ ಕುಂದಿಸುವ ಕೆಲಸ ಎಂದಿದ್ದಾರೆ.

ಬಳ್ಳಾರಿ, ಏಪ್ರಿಲ್​ 03: ಕರ್ತವ್ಯ ನಿರತ ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ ಮಾಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಫುಟ್ಪಾತ್ ಮೇಲೆ ಇದ್ದ ಶೆಡ್ ತೆರವು ವಿಳಂಬ‌ ಹಿನ್ನೆಲೆ ಬಳ್ಳಾರಿ ಪಾಲಿಕೆಯ 39ನೇ ವಾರ್ಡ್​ನ ಕಾಂಗ್ರೆಸ್ ಸದಸ್ಯ ವಿ. ಕುಬೇರ, ಪಾಲಿಕೆಯ ಎಇಇ ವೀರೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಇನ್ನು ಈ ಬಗ್ಗೆ ಕಮಿಷನರ್​ ಮಾತನಾಡಿದ್ದು, ಸಾರ್ವಜನಿಕ ಪ್ರತಿನಿಧಿಗಳು ಗೌರವ ಕಾಪಾಡಿಕೊಳ್ಳದೆ ಇಂತಹ ಅಮಾನವೀಯ ಕೃತ್ಯ ನಡೆಸಿರುವುದು ಖಂಡನೀಯ ಎಂದಿದ್ದಾರೆ. ಘಟನೆ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲಾಗುವುದು ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Apr 03, 2026 08:46 PM
Follow Us