ಹೊಂದಾಣಿಕೆ ರಾಜಕಾರಣ ಮಾಡಿದ್ದರೆ ಕಾಂಗ್ರೆಸ್ ಸರ್ಕಾರವನ್ನು ಒಂಟಿಗಾಲಲ್ಲಿ ನಿಲ್ಲಿಸೋದು ಸಾಧ್ಯವಿರಲಿಲ್ಲ: ವಿಜಯೇಂದ್ರ

ಅರುಣ್​ ಕುಮಾರ್​ ಬೆಳ್ಳಿ

Updated on: Feb 06, 2025 | 3:07 PM

ಪಕ್ಷದ ಹಿರಿಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪದೇಪದೆ ತನ್ನ ವಿರುದ್ಧ ಆರೋಪ ಮಾಡಲಾಗುತ್ತಿದೆ ಮತ್ತು ಯಡಿಯೂರಪ್ಪರನ್ನು ಅವಮಾನಿಸುವ ಹೇಳಿಕೆಗಳು ಬರುತ್ತಿದ್ದರೂ ಕೆಲ ಹಿರಿಯ ನಾಯಕರು ಮೌನವಾಗಿರುವುದು ಆಶ್ಚರ್ಯ ಹುಟ್ಟಿಸುತ್ತದೆ, ಸಂಘಟನೆಯ ಚುನಾವಣೆ ಮುಗಿದ ಬಳಿಕ ಬಸನಗೌಡ ಯತ್ನಾಳ್ ಮತ್ತು ಉಳಿದವರಿಗೆ ಉತ್ತರ ನೀಡುತ್ತೇನೆ ಎಂದು ವಿಜಯೇಂದ್ರ ಹೇಳಿದರು.

ಬೆಂಗಳೂರು: ತಾನು ಯಾವತ್ತೂ ಹೊಂದಾಣಿಕೆ ರಾಜಕಾರಣ ಮಾಡಿದವನಲ್ಲ, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದಾರಾಮಯ್ಯ ಅವರ ವಿರುದ್ಧ ಬೆಂಗಳೂರುನಿಂದ ಮೈಸೂರಿಗೆ ಕಾರ್ಯಕರ್ತರೊಂದಿಗೆ ಪಾದಯಾತ್ರೆ ಮಾಡಿ ಸರ್ಕಾರವನ್ನು ಒಂಟಿಗಾಲಲ್ಲಿ ನಿಲ್ಲುವಂತೆ ಮಾಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ರಾಜ್ಯಾಧ್ಯಕ್ಷ ಆದಾಗಿನಿಂದ ಒಂದು ದಿನವೂ ಮನೆಯಲ್ಲಿ ಕೂರದೆ ಸರ್ಕಾರದ ವಿರುದ್ಧ ನಡೆಸಿದ ಹೋರಾಟ ಮತ್ತು ಪಕ್ಷದ ಸಂಘಟನೆಗಾಗಿ ರಾಜ್ಯದಾದ್ಯಂತ ಸುತ್ತಾಡಿದ ಪರಿಣಾಮವೇ ಸಂಘಟನೆ ವಿಷಯದಲ್ಲಿ ಕರ್ನಾಟಕವು ದೇಶದಲ್ಲಿ 4 ನೇ ಸ್ಥಾನದಲ್ಲಿದೆ ಎಂದು ವಿಜಯೇಂದ್ರ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ದೆಹಲಿಯಲ್ಲೂ ಸದ್ದು ಮಾಡ್ತಿದೆ ಕರ್ನಾಟಕ ಬಿಜೆಪಿ ಬಂಡಾಯ: ವಿಜಯೇಂದ್ರ ವಿರುದ್ಧ ಹೈಕಮಾಂಡ್‌ ಮುಂದೆ ರೆಬೆಲ್ಸ್ ಸಮರ

Published on: Feb 06, 2025 03:04 PM
Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.