PM Narendra Modi in Karnataka: ಪ್ರಧಾನಿಗಳ ಆಗಮನಕ್ಕೆ ಕ್ಷಣಗಣನೆ ಆರಂಭ, ಹೆಚ್ ಎ ಎಲ್ ವಿಮಾನ ನಿಲ್ದಾಣದ ಸುತ್ತ ಪೊಲೀಸ್ ಸರ್ಪಗಾವಲು
ಧಾನಿಗಳ ಭದ್ರತೆ ದೃಷ್ಷಿಯಿಂದ ಮೂವರು ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಸುಮಾರು 500 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿಯನ್ನು ವಿಮಾನ ನಿಲ್ದಾಣದ ಸುತ್ತ ನಿಯೋಜಿಸಲಾಗಿದೆ.
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಇನ್ನು ಕೆಲವೇ ಕ್ಷಣಗಳಲ್ಲಿ ನಗರದ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ (HAL Airport) ಲ್ಯಾಂಡ್ ಅಗಲಿದ್ದಾರೆ. ಟಿವಿ ಬೆಂಗಳೂರು ವರದಿಗಾರ ತಿಳಿಸುವ ಹಾಗೆ ಪ್ರಧಾನಿಗಳನ್ನು ಸ್ವಾಗತಿಸಲು ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಇತರ ಕೆಲವು ಗಣ್ಯರು ಈಗಾಗಲೇ ವಿಮಾನ ನಿಲ್ದಾಣದೊಳಗೆ ಹೋಗಿದ್ದಾರೆ. ಪ್ರಧಾನಿಗಳ ಭದ್ರತೆ ದೃಷ್ಷಿಯಿಂದ ಮೂವರು ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಸುಮಾರು 500 ಕ್ಕೂ ಹೆಚ್ಚು ಪೋಲಿಸ್ ಸಿಬ್ಬಂದಿಯನ್ನು ವಿಮಾನ ನಿಲ್ದಾಣದ ಸುತ್ತ ನಿಯೋಜಿಸಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ