ಚಿತ್ರದುರ್ಗ ಸರ್ಕಾರಿ ಆಪರೇಷನ್ ಥಿಯೇಟರಿನಲ್ಲೇ ಪ್ರಿವೆಡ್ಡಿಂಗ್ ವಿಡಿಯೋ ಶೂಟ್, ಪೇಚಿಗೆ ಸಿಲುಕಿದ ಜೋಡಿ!
ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಆಪರೇಷನ್ ಥಿಯೇಟರ್ ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಡಾ.ಅಭಿಷೇಕ್ ಜೋಡಿ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಸಾರ್ವಜನಿಕರು ಕಿಡಿಕಾರಿದ್ದಾರೆ.
ಚಿತ್ರದುರ್ಗ, ಫೆ.09: ಇತ್ತೀಚಿನ ದಿನಗಳಲ್ಲಿ ಡಿಫರೆಂಟ್ ಆಗಿ, ಯುನೀಕ್ ಆಗಿ ಪ್ರಿವೆಡ್ಡಿಂಗ್ ಶೂಟ್ ಮಾಡಿಸೋದು ಟ್ರೆಂಡ್. ಇದಕ್ಕಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡುವವರೂ ಇದ್ದಾರೆ. ಹೊಲ-ಗದ್ದೆಗಳಲ್ಲಿ ರೈತ ಜೋಡಿಯಂತೆ ಫೋಸ್ ಕೊಟ್ಟು ವಿಡಿಯೋ ಮಾಡಿಸೋದು, ಸಮುದ್ರ ಕಿನಾರೆಗಳಲ್ಲಿ ನೃತ್ಯ ಮಾಡುತ್ತ ವಿಡಿಯೋ ಮಾಡಿಸೋ ಎಷ್ಟೋ ನವ ಜೋಡಿಗಳನ್ನ ನೀವು ನೋಡಿರಬಹುದು. ಆದರೆ ಚಿತ್ರದುರ್ಗದಲ್ಲಿ ಜೋಡಿಯೊಂದು ಆಪರೇಷನ್ ಥಿಯೇಟರ್ನಲ್ಲಿ (Operation Theatre) ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದು (Pre Wedding Video Shoot) ವಿವಾದಕ್ಕೆ ಕಾರಣವಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯ ಡಾ.ಅಭಿಷೇಕ್ ಯಡವಟ್ಟಿಗೆ ಆಕ್ರೋಶ ವ್ಯಕ್ತವಾಗಿದೆ.
ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಎಂಬುವವರು ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದಾರೆ. ವ್ಯಕ್ತಿಗೆ ಆಪರೇಷನ್ ಮಾಡುತ್ತಿರುವಂತೆ ವಿಡಿಯೋ ಶೂಟ್ ಮಾಡಿಸಿದ್ದು ಡಾ.ಅಭಿಷೇಕ್ ಜೋಡಿಯ ಪ್ರಿವೆಡ್ಡಿಂಗ್ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಡಾ.ಅಭಿಷೇಕ್ ಜೋಡಿ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಸಾರ್ವಜನಿಕರು ಕಿಡಿಕಾರಿದ್ದಾರೆ.
ಇದನ್ನೂ ಓದಿ: ಹಿಂದೂ ಕಾರ್ಯಕರ್ತರ ಪ್ರತಿಭಟನೆ; ಮಂಡ್ಯ ಶಾಸಕ ರವಿ ಗಣಿಗ ಮನೆಗೆ ಪೊಲೀಸ್ ಭದ್ರತೆ
ಇನ್ನು ಘಟನೆ ಸಂಬಂಧ ಚಿತ್ರದುರ್ಗ ಡಿಹೆಚ್ಒ ಡಾ.ರೇಣುಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ. ಆಸ್ಪತ್ರೆ ಆಪರೇಷನ್ ಥಿಯೇಟರ್ ದುರ್ಬಳಕೆ ಆಗಿದೆ. ಭರಮಸಾಗರ ಆಸ್ಪತ್ರೆ ವೈದ್ಯಾಧಿಕಾರಿಗೆ ನೋಟಿಸ್ ಜಾರಿ ಮಾಡಿದ್ದೇವೆ. ಒಂದು ತಿಂಗಳ ಹಿಂದೆ ಡಾ.ಅಭಿಷೇಕ್ ನೇಮಕ ಆಗಿದ್ದರು. ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿ ಆಗಿ ನೇಮಕ ಆಗಿದ್ರು. ಪರಿಶೀಲನೆ ನಡೆಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎ.ದಿ ಚಿತ್ರದುರ್ಗ ಡಿಹೆಚ್ಒ ಡಾ.ರೇಣುಪ್ರಸಾದ್ ತಿಳಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ