ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಕೋವಿಡ್-19 ನಿಯಮಾವಳಿಗಳನ್ನು ಜಾರಿಗೊಳಿಸಲಾಗುತ್ತಿದೆ: ಡಿಕೆ ಶಿವಕುಮಾರ
ಮೇಕೆದಾಟು ಯೋಜನೆ ಅನುಷ್ಠಾನ ಆಗ್ರಹಿಸಿ ಪಾದಯಾತ್ರೆ ಕೈಗೊಂಡಾಗಲೂ ಕೊರೋನಾ ಸೋಂಕಿನ ನೆಪವೊಡ್ಡಿ ಅದನ್ನು ನಿಲ್ಲಿಸುವ ಪ್ರಯತ್ನ ರಾಜ್ಯ ಸರ್ಕಾರ ಮಾಡಿತ್ತು, ಎಂದು ಶಿವಕುಮಾರ ಹೇಳಿದರು.
ಬೆಳಗಾವಿ: ರಾಹುಲ್ ಗಾಂಧಿ (Rahul Gandhi) ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಕಾಣುತ್ತಿರುವ ಅಪಾರ ಯಶಸ್ಸಿನಿಂದ ಗಾಬರಿಗೊಳಗಾಗಿರುವ ಕೇಂದ್ರ ಸರ್ಕಾರ (Central Government) ಅದನ್ನು ನಿಲ್ಲಿಸಲು ಪುನಃ ಕೋವಿಡ್-19 ಸೋಂಕು ನಿಯಂತ್ರಣ ನಿಯಮಾವಳಿಗಳನ್ನು ಜಾರಿಗೊಳಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಹೇಳಿದ್ದಾರೆ. ಬೆಳಗಾವಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತಾಡಿದ ಅವರು ಮೇಕೆದಾಟು ಯೋಜನೆ ಅನುಷ್ಠಾನವನ್ನು ಆಗ್ರಹಿಸಿ ಪಾದಯಾತ್ರೆ ಕೈಗೊಂಡಾಗಲೂ ಕೊರೋನಾ ಸೋಂಕಿನ ನೆಪವೊಡ್ಡಿ ಅದನ್ನು ನಿಲ್ಲಿಸುವ ಪ್ರಯತ್ನ ರಾಜ್ಯ ಸರ್ಕಾರ ಮಾಡಿತ್ತು, ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos