Covid19 Scare: ಬಿಎಮ್ ಟಿಸಿ ಮತ್ತು ಕೆಎಸ್ಆರ್ ಟಿಸಿ ಬಸ್ ಗಳಲ್ಲಿ ಪ್ರಯಾಣಿಸುವವರು ಮಾಸ್ಕ್ ಧರಿಸುವುದು ಕಡ್ಡಾಯ!
ಅದರಲ್ಲೂ ಪ್ರಮುಖ ಸಾರ್ವಜನಿಕ ಸ್ಥಳಗಳಾಗಿರುವ ಮೆಟ್ರೋ ಮತ್ತು ಕೆಂಪೇಗೌಡ ಬಸ್ ನಿಲ್ದಾಣಗಳಲ್ಲಿ ಜನರ ಸ್ಕ್ರೀನಿಂಗ್ ವ್ಯವಸ್ಥೆಗೆ ಏರ್ಪಾಟು ಮಾಡಲಾಗುತ್ತಿದೆ.
ಬೆಂಗಳೂರು: ನಗರದಲ್ಲಿ ಕೋವಿಡ್-19 (Covid-19) ಸೋಂಕನ್ನು ತಡೆಯುವ ನಿಟ್ಟಿನಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಅದರಲ್ಲೂ ಪ್ರಮುಖ ಸಾರ್ವಜನಿಕ ಸ್ಥಳಗಳಾಗಿರುವ ಮೆಟ್ರೋ ಮತ್ತು ಕೆಂಪೇಗೌಡ ಬಸ್ ನಿಲ್ದಾಣಗಳಲ್ಲಿ (Kempegowda Bus Terminals) ಜನರ ಸ್ಕ್ರೀನಿಂಗ್ ವ್ಯವಸ್ಥೆಗೆ ಏರ್ಪಾಟು ಮಾಡಲಾಗುತ್ತಿದೆ. ಬಸ್ಸುಗಳಲ್ಲಿ ಸಾರ್ವಜನಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಕಡ್ಡಾಯವಾಗಿ ಮಾಸ್ಕ್ (mask) ಧರಿಸುವಂತೆ ಜನರಿಗೆ ತಾಕೀತು ಮಾಡಲಾಗುತ್ತಿದೆ. ವಿಡಿಯೋದಲ್ಲಿ ನಿಮಗೆ ಕಾಣುತ್ತಿರುವ ಹಾಗೆ ಕೆಂಪೇಗೌಡ ನಗರ ಸಾರಿಗೆ ಬಸ್ ನಿಲ್ದಾಣದಲ್ಲಿ ಟ್ರಾಫಿಕ್ ಕಂಟ್ರೋಲರ್ ಒಬ್ಬರು ಜನ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಬೇಕೆಂದು ತಮ್ಮ ಸಿಬ್ಬಂದಿಗೆ ಹೇಳುತ್ತಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Published on: Dec 23, 2022 06:43 PM