ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?

ಕೊವಿಡ್ ಹಗರಣದ ತನಿಖೆಗೆ SIT ರಚನೆ: ಡಾ ಸಿಎನ್ ಮಂಜುನಾಥ್​ಗೂ ಸಂಕಷ್ಟ?

TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Nov 14, 2024 | 5:51 PM

ಬಿಜೆಪಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣವನ್ನು ಸಿದ್ದರಾಮಯ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು, ಹಗರಣದ ತನಿಖೆಗಾಗಿ ಎಸ್​ಐಟಿ ರಚಿಸಲು ತೀರ್ಮಾನಿಸಿದೆ. ಇಂದು ನಡೆದ ಸಂಪುಟ ಸಭೆಯಲ್ಲಿ ತೀರ್ಮಾನವಾಗಿದೆ. ಇದರಿಂದ ಅಂದಿನ ಸಿಎಂ ಬಿಎಸ್​ವೈ, ಆರೋಗ್ಯ ಸಚಿವರಾಗಿದ್ದ ಶ್ರೀರಾಮುಲು ಅವರಿಗೆ ಸಂಕಷ್ಟ ಎದುರಾಗಲಿದೆ. ಇನ್ನು ಡಾ ಸಿಎನ್​ ಮಂಜುನಾಥ್ ಅವರ ಬುಡಕ್ಕೂ ಈ ಕೋವಿಡ್ ಹಗರಣ ಬರುವ ಸಾಧ್ಯತೆಗಳಿವೆ.

ಬೆಂಗಳೂರು, (ನವೆಂಬರ್ 14): ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ನಡೆದಿದೆ ಎನ್ನಲಾಗಿರುವ ಬಗ್ಗೆ ಈಗಾಗಲೇ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ಮಧ್ಯಂತರ ವರದಿ ನೀಡಿದ್ದು, 918 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಿದೆ. ಹೀಗಾಗಿ ಸಿದ್ದರಾಮಯ್ಯ ಸರ್ಕಾರ ಕೋವಿಡ್ ಹಗರಣದ ತನಿಖೆಯನ್ನು ಎಸ್​​ಐಟಿ ವಹಿಸಲು ತೀರ್ಮಾನಿಸಿದೆ. ಇಂದು(ನವೆಂಬರ್ 14) ನಡೆದ ಸಚಿವ ಸಂಪುಟದಲ್ಲಿ ತಿರ್ಮಾನಿಸಲಾಗಿದೆ. ಇದರಿಂದ ಬಿಜೆಪಿ ಸಂಸದ ಡಾ ಸಿಎನ್​ ಮಂಜುನಾಥ್​ ಶಂಕಷ್ಟ ಎದುರಾಗುವ ಸಾಧ್ಯತೆಗಳಿವೆ. ಯಾಕಂದ್ರೆ ಮಂಜುನಾಥ್ ಅವರು ಕೋವಿಡ್ ಸಂದರ್ಭದಲ್ಲಿ ಟಾಸ್ಕ್ ಫೋರ್ಸ್ ಕಮಿಟಿ ಮುಖ್ಯಸ್ಥರಾಗಿದ್ದರು. ಟಾಸ್ಕ್ ಫೋರ್ಸ್ ನಿರ್ಣಯದಂತೆ ಕೆಲ ಉಪಕರಣಗಳ ಖರೀದಿ ಆಗಿದೆ. ಈ ಹಿನ್ನೆಲೆ ಟಾಸ್ಕ್ ಫೋರ್ಸ್ ಬಗ್ಗೆಯೂ ಕುನ್ಹಾ ವರದಿಯಲ್ಲಿ ಪ್ರಸ್ತಾಪವಾಗಿದೆ. ಇದರಿಂದ ಮಂಜುನಾಥ್ ಅವರ ಬುಡಕ್ಕೂ ಹಗರಣ ಬಂದರೂ ಅಚ್ಚರಿ ಪಡಬೇಕಿಲ್ಲ.