ಐಷಾರಾಮಿ ಕಾರಿನಲ್ಲಿ ಬಂದು ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಗೋವು ಕಳ್ಳತನ
ಐಷಾರಾಮಿ ಕಾರಿನಲ್ಲಿ ಬಂದು ಗುರುತು ಸಿಗದಂತೆ ಮಂಕಿ ಕ್ಯಾಪ್ ಧರಿಸಿ ಗೋವು ಕಳ್ಳತನ ಮಾಡಿರುವ ಘಟನೆ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋವು ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಚಿಕ್ಕಮಗಳೂರು, ಜನವರಿ 13: ಐಷಾರಾಮಿ ಕಾರಿನಲ್ಲಿ ಬಂದು ಗುರುತು ಸಿಗದಂತೆ ಮಂಕಿ ಕ್ಯಾಪ್ (Monkry Cap) ಧರಿಸಿ ಗೋವು (Cow) ಕಳ್ಳತನ ಮಾಡಿರುವ ಘಟನೆ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋವು ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮೂಡಿಗೆರೆ ಪಟ್ಟಣದಲ್ಲಿ ಮಧ್ಯರಾತ್ರಿ ರಸ್ತೆ ಬದಿ ಮಲಗಿದ್ದ ಗೋವನ್ನು ಕದ್ದೊಯ್ದಿದ್ದಾರೆ. ಕಾರಿನಲ್ಲಿ ಒಂದು ಗೋವನ್ನು ತುಂಬಿಕೊಳ್ಳುತ್ತಿದ್ದಂತೆ ಮತ್ತೊಂದು ಗೋವು ಕಾರಿನ ಹಿಂದೆಯೇ ಓಡಿದೆ. ಆ ಗೋವನ್ನು ರಕ್ಷಿಸಲು ಯತ್ನಿಸಿದೆ. ಈ ಎಲ್ಲ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಇನ್ನು ಕಳೆದ ವರ್ಷ ಮೇ ತಿಂಗಳಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್ ಪುರ ತಾಲೂಕಿನ ಮಾಗುಂಡಿ ಗ್ರಾಮದ ಸೇತುವೆ ಕೆಳಭಾಗದಲ್ಲಿ ಗೋವಿನ ಎರಡು ತಲೆ, ಎಂಟು ಕಾಲುಗಳು ಪತ್ತೆ ಆಗಿದ್ದವು. ಅಲ್ಲದೇ ಚಿಕ್ಕಮಗಳೂರು, ಶೃಂಗೇರಿ, ಮೂಡಿಗೆರೆ, ಎನ್.ಆರ್ ಪುರ ತಾಲೂಕಿನಲ್ಲಿ ನಿರಂತರವಾಗಿ ಗೋಮಾಂಸ ದಂಧೆ ನಡೆಯುತ್ತಿದೆ ಎಂಬ ಮಾತು ಕೇಳಿಬಂದಿತ್ತು. ಕೊಟ್ಟಿಗೆಯಲ್ಲಿ ಕಟ್ಟಿದ್ದ ಗೋವುಗಳನ್ನು ದಂಧೆಕೋರರು ಕಳ್ಳತನ ಮಾಡುತ್ತಿದ್ದರು.