Assembly Polls; ಸಿಪಿ ಯೋಗೇಶ್ವರ್ ಗೆ ಬಿಜೆಪಿಯಲ್ಲಿ ಉಸಿರುಗಟ್ಟಿಸುವ ವಾತಾವರಣ, ಹಾಗಾಗಿ ಕಾಂಗ್ರೆಸ್ ಸೇರಲು ಬಯಸುತ್ತಿದ್ದಾರೆ: ಎನ್ ಚೆಲುವರಾಯಸ್ವಾಮಿ

Edited By:

Updated on: Mar 28, 2023 | 2:31 PM

ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮನವಿ ಸಲ್ಲಿಸಿದರೆ ಕೆಪಿಸಿಸಿ ಅಧ್ಯಕ್ಷ ಮತ್ತು ಹಿರಿಯ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ

ಬೆಂಗಳೂರು: ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ (CP Yogeshwar) ಕಾಂಗ್ರೆಸ್ ಸೇರುವ ಬಗ್ಗೆ ದಟ್ಟ ವದಂತಿಗಳು ಹಬ್ಬಿವೆ. ವಿಷಯಕ್ಕೆ ಸಂಬಂಧಿಸಿದಂತೆ ಬೆಂಗಳೂರಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ನಾಯಕ ಎನ್ ಚೆಲುವರಾಯಸ್ವಾಮಿ (N Cheluvarayaswamy) ಯಾವುದನ್ನೂ ಸ್ಪಷ್ಟಪಡಿಸಲಿಲ್ಲ. ಆದರೆ, ಯೋಗೇಶ್ವರ್ ಅವರಿಗೆ ಉಸಿರುಗಟ್ಟಿಸುವಂಥ ಸ್ಥಿತಿ ಇದೆ, ಹಾಗಾಗಿ ಅವರು ಕಾಂಗ್ರೆಸ್ ಸೇರಲು ಬಯಸಿದ್ದಾರೆ ಎಂದು ಹೇಳಿದರು. ಅವರು ಪಕ್ಷಕ್ಕೆ ಸೇರ್ಪಡೆಯಾಗುವ ಮನವಿ ಸಲ್ಲಿಸಿದರೆ ಕೆಪಿಸಿಸಿ (KPCC) ಅಧ್ಯಕ್ಷ ಮತ್ತು ಹಿರಿಯ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಚೆಲುವರಾಯಸ್ವಾಮಿ ಹೇಳಿದರು. ಈ ಬಾರಿ ಕಾಂಗ್ರೆಸ್ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ, ಸಮ್ಮಿಶ್ರ ಸರ್ಕಾರದ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ