ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಇದ್ದಕ್ಕಿದ್ದಂತೆ ಭೇಟಿ ನೀಡಿ ಆಶ್ಚರ್ಯ ಮೂಡಿಸಿದ ಯೋಗೇಶ್ವರ್
ಕೊನೆ ಘಳಿಗೆಯಲ್ಲಿ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿ ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದ ಯೋಗೇಶ್ವರ್ ತಮ್ಮ ಪ್ರಚಾರ ಭಾಷಣಗಳಲ್ಲಿ ಯಾರನ್ನೂ ತೆಗಳುವ ಕೆಲಸ ಮಾಡಲಿಲ್ಲ, ಪ್ರತಿ ಹೆಜ್ಜೆಯನ್ನು ಎಚ್ಚರಿಕೆಯಿಂದ ಇಟ್ಟರು, ಮತದಾನದ ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಅವರು ಹತಾಶೆಯಿಂದ ಮಾತಾಡಿದ್ದು ಮಾತ್ರ ಆಶ್ಚರ್ಯ ಹುಟ್ಟಿಸಿತ್ತು.
ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಆಯ್ಕೆಯಾಗಿರುವ ಸಿಪಿ ಯೋಗೇಶ್ವರ್ ಇಂದು ದಿಢೀರನೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಿದ್ದು ಆಶ್ಚರ್ಯ ಮೂಡಿಸಿದೆ. ಯಾಕೆ ಬಂದಿದ್ದು ಅಂತ ಸಿಎಂ ಅವರನ್ನು ಭೇಟಿಯಾಗಿ ವಾಪಸ್ಸು ಹೋಗುವಾಗ ಯೋಗೇಶ್ವರ್ ಅವರೇ ಹೇಳಿದರು. ಚನ್ನಪಟ್ಟಣದಲ್ಲಿ ಒಂದು ಅಭಿನಂದನಾ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ, ಹಾಗಾಗಿ ಮುಖ್ಯಮಂತ್ರಿಯವರಲ್ಲಿ ಡೇಟ್ ಕೇಳಲು ಬಂದಿದ್ದು ಎಂದು ಶಾಸಕ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದೇವೇಗೌಡರ ಬಗ್ಗೆ ಕಾಮೆಂಟ್ ಮಾಡುವ ಯಾವುದೇ ನೈತಿಕತೆ ಯೋಗೇಶ್ವರ್ಗಿಲ್ಲ: ಸುರೇಶ್ ಬಾಬು
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
