ಹಳೆಯ ಮೈಸೂರು ಭಾಗದಲ್ಲಿ ನೀರಿಗಾಗಿ ಹಾಹಾಕಾರ ಸೃಷ್ಟಿಯಾಗಿದೆ, ಎಲ್ಲಿ ನಿಮ್ಮ ಮೇಕೆದಾಟು ಯೋಜನೆ ಶಿವಕುಮಾರ್? ಸಿಪಿ ಯೋಗೇಶ್ವರ್

|

Updated on: Apr 04, 2024 | 4:38 PM

ಕಾಂಗ್ರೆಸ್ ಪಕ್ಷದ ರಾಕ್ಷಸ ಸಂಸ್ಕೃತಿಯನ್ನು ಸಂಹಾರ ಮಾಡಲೆಂದೇ ದೇವೇಗೌಡ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಗಳನ್ನು ಒಂದುಗೂಡಿಸಿದ್ದಾರೆ ಎಂದು ಯೋಗೇಶ್ವರ್ ಹೇಳಿದರು. ಎರಡು ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ದುಡಿಯುತ್ತಿರುವುದರಿಂದ ಸೋಲಿನಿಂದ ತಪ್ಪಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಿಲ್ಲ ಎಂದು ಅವರು ಹೇಳಿದರು.

ರಾಮನಗರ: ನಗರದಲ್ಲಿಂದು ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ (Dr CN Manjunath) ಪರ ಬೃಹತ್ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತಾಡಿದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ (CP Yogeshwar) ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮತ್ತು ಡಿಕೆ ಸುರೇಶ್ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ ಮಳೆಯಿಲ್ಲದೆ ಕೆರೆ ಕುಂಟೆಗಳು, ಬೋರ್ ವೆಲ್ ಗಳು ಬತ್ತಿ ಹೋಗಿವೆ, ನೀರಿಗಾಗಿ ಹಾಹಾಕಾರ ಸೃಷ್ಟಿಯಾಗಿದೆ, ರಾಮನಗರವನ್ನು ಉದ್ಧಾರ ಮಾಡುತ್ತೇನೆಂದು ಹೇಳಿದ್ದ ಶಿವಕುಮಾರ್ ಎಲ್ಲಿದ್ದಾರೆ ಎಂದು ಯೋಗೇಶ್ವರ್ ಪ್ರಶ್ನಿಸಿದರು. ಕೇವಲ ಜನರನ್ನು ಮೆಚ್ಚಿಸಲು ಮತ್ತು ವೋಟು ಗಿಟ್ಟಿಸಲು ಶಿವಕುಮಅರ್ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದರು ಎಂದು ಯೋಗೇಶ್ವರ್ ತಿವಿದರು. ಕಾಂಗ್ರೆಸ್ ಪಕ್ಷದ ರಾಕ್ಷಸ ಸಂಸ್ಕೃತಿಯನ್ನು ಸಂಹಾರ ಮಾಡಲೆಂದೇ ದೇವೇಗೌಡ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಗಳನ್ನು ಒಂದುಗೂಡಿಸಿದ್ದಾರೆ ಎಂದು ಯೋಗೇಶ್ವರ್ ಹೇಳಿದರು. ಎರಡು ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ದುಡಿಯುತ್ತಿರುವುದರಿಂದ ಸೋಲಿನಿಂದ ತಪ್ಪಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಿಲ್ಲ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನನ್ನ ಮತ್ತು ಕುಮಾರಸ್ವಾಮಿ ನಡುವೆ ರಾಜಕೀಯ ವೈಷಮ್ಯವಿರಲಿಲ್ಲ; ಬೇರೆ ಬೇರೆ ಪಕ್ಷಗಳಲ್ಲಿದ್ದೆವು, ಅಷ್ಟೇ: ಸಿಪಿ ಯೋಗೇಶ್ವರ್