ಬೆನ್ ಮೆಕ್‌ಡರ್ಮಾಟ್ ಸಿಡಿಲಬ್ಬರ: ವಾರಿಯರ್ಸ್ ಪಡೆಗೆ ಭರ್ಜರಿ ಜಯ
St Kitts and Nevis Patriots vs Guyana Amazon Warriors: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 153 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡಕ್ಕೆ ಬೆನ್ ಮೆಕ್‌ಡರ್ಮಾಟ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು.
ವೆಸ್ಟ್ ಇಂಡೀಸ್ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್ನ 2ನೇ ಪಂದ್ಯದಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಸೇಂಟ್ ಕಿಟ್ಸ್ನ ವಾರ್ನರ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ಹಾಗೂ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ಕಳೆದುಕೊಂಡು 153 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡಕ್ಕೆ ಬೆನ್ ಮೆಕ್‌ಡರ್ಮಾಟ್ ಸಿಡಿಲಬ್ಬರದ ಆರಂಭ ಒದಗಿಸಿದ್ದರು.
ಮೊದಲ ಓವರ್ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಮೆಕ್‌ಡರ್ಮಾಟ್ 39 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 10 ಫೋರ್ಗಳೊಂದಿಗೆ 75 ರನ್ ಬಾರಿಸಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನೊಂದಿಗೆ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 17.2 ಓವರ್ಗಳಲ್ಲಿ 154 ರನ್ ಬಾರಿಸಿ 5 ವಿಕೆಟ್ಗಳ ಗೆಲುವು ದಾಖಲಿಸಿದೆ.

