VIDEO: ಹೀಗೂ ಸಿಕ್ಸ್ ತಡೆಯಬಹುದೇ?
Antigua and Barbuda Falcons vs Guyana Amazon Warriors: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 20 ಓವರ್ಗಳಲ್ಲಿ 212 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಅಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ತಂಡವು ಕೇವಲ 128 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 83 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಕೆರಿಬಿಯನ್ ಪ್ರೀಮಿಯರ್ ಲೀ್ಗ್ನ 9ನೇ ಪಂದ್ಯದಲ್ಲಿ ಫ್ಯಾಬಿಯನ್ ಅಲೆನ್ ಎಲ್ಲರೂ ನಿಬ್ಬೆರಗಾಗುವಂತಹ ಫೀಲ್ಡಿಂಗ್ ಮಾಡಿದ್ದಾರೆ. ಅದು ಸಹ ಬೌಂಡರಿ ಲೈನ್ ಒಳಕ್ಕೆ ಹಾರಿ ಸಿಕ್ಸ್ ತಡೆಯುವ ಮೂಲಕ ಎಂಬುದೇ ಅಚ್ಚರಿ. ಅಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಅಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ಮತ್ತು ಗಯಾನಾ ಅಮೆಝಾನ್ ವಾರಿಯರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡದ ನಾಯಕ ಇಮ್ರಾನ್ ತಾಹಿರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಡ್ ಮಾಡಿದ ಗಯಾನಾ ಅಮೆಝಾನ್ ವಾರಿಯರ್ಸ್ ಪರ 5ನೇ ಕ್ರಮಾಂಕದಲ್ಲಿ ರೊಮಾರಿಯೊ ಶೆಫರ್ಡ್ ಕಣಕ್ಕಿಳಿದಿದ್ದರು. ಅಲ್ಲದೆ ಸ್ಪ್ರಿಂಗರ್ ಎಸೆದ 20ನೇ ಓವರ್ನ ಮೊದಲ ಎಸೆತದಲ್ಲಿ ಸ್ಟ್ರೈಟ್ ಹಿಟ್ ಶಾಟ್ ಬಾರಿಸಿದ್ದರು. ಚೆಂಡು ಇನ್ನೇನು ಬೌಂಡರಿ ಲೈನ್ ದಾಟಲಿದೆ ಅನ್ನುವಷ್ಟರಲ್ಲಿ ಬೌಂಡರಿ ಲೈನ್ ಒಳಕ್ಕೆ ಹಾರಿದ ಫ್ಯಾಬಿಯನ್ ಅಲೆನ್ ಕ್ಷಣಾರ್ಧದಲ್ಲಿ ಚೆಂಡನ್ನು ಹಿಡಿದು ಹೊರಕ್ಕೆ ಎಸೆದರು. ಈ ಮೂಲಕ ಅತ್ಯದ್ಭುತ ಫೀಲ್ಡಿಂಗ್ನೊಂದಿಗೆ ಸಿಕ್ಸ್ ತಡೆಯುವಲ್ಲಿ ಯಶಸ್ವಿಯಾದರು.
ಇದೀಗ ಫ್ಯಾಬಿಯನ್ ಅಲೆನ್ ಅವರ ಈ ಅತ್ಯದ್ಭುತ ಫೀಲ್ಡಿಂಗ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಕ್ರಿಕೆಟ್ ಪ್ರೇಮಿಗಳಿಂದ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 20 ಓವರ್ಗಳಲ್ಲಿ 212 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಅಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ತಂಡವು ಕೇವಲ 128 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 83 ರನ್ಗಳ ಭರ್ಜರಿ ಜಯ ಸಾಧಿಸಿದೆ.

