ಸತತ ಸೋಲಿನ ನಡುವೆ ಪ್ಲೇಆಫ್ಗೇರಿದ TKR
Guyana Amazon Warriors vs Trinbago Knight Riders: ಈ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 19.5 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 168 ರನ್ಗಳಿಸಿ 3 ವಿಕೆಟ್ಗಳ ಜಯ ಸಾಧಿಸಿದೆ.
ಕೆರಿಬಿಯನ್ ಪ್ರೀಮಿಯರ್ ಲೀಗ್ನ 23ನೇ ಪಂದ್ಯದಲ್ಲಿ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡ ಸೋಲನುಭವಿಸಿದೆ. ಈ ಸೋಲಿನ ಹೊರತಾಗಿಯೂ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡವು ಪ್ಲೇಆಫ್ಗೇರುವಲ್ಲಿ ಯಶಸ್ವಿಯಾಗಿದೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಗಯಾನಾ ಅಮೆಝಾನ್ ವಾರಿಯರ್ಸ್ ಹಾಗೂ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಗಯಾನಾ ಅಮೆಝಾನ್ ವಾರಿಯರ್ಸ್ ತಂಡವು 19.5 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 168 ರನ್ಗಳಿಸಿ 3 ವಿಕೆಟ್ಗಳ ಜಯ ಸಾಧಿಸಿದೆ.
ಇದಕ್ಕೂ ಮುನ್ನ ಸೇಂಟ್ ಲೂಸಿಯಾ ಕಿಂಗ್ಸ್ ವಿರುದ್ಧದ ಪಂದ್ಯದಲ್ಲೂ ಟಿಕೆಆರ್ ಸೋಲನುಭವಿಸಿತ್ತು. ಈ ಸೋಲುಗಳ ಹೊರತಾಗಿಯೂ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವ ಮೂಲಕ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡವು ಪ್ಲೇಆಫ್ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.
ಈ ಬಾರಿಯ ಟೂರ್ನಿಯಲ್ಲಿ ಈವರೆಗೆ 9 ಪಂದ್ಯಗಳನ್ನಾಡಿರುವ ಟಿಕೆಆರ್ 6 ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ. ಈ ಮೂಲಕ ಒಟ್ಟು 12 ಅಂಕಗಳೊಂದಿಗೆ ನಿರ್ಣಾಯಕ ಹಂತಕ್ಕೆ ಎಂಟ್ರಿ ಕೊಟ್ಟಿದೆ.

