VIDEO: ಉಫ್… ಅತ್ಯದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಜ್ಯುವೆಲ್ ಆ್ಯಂಡ್ರ್ಯೂ
Jewel Andrew's Diving Catch: ಜೇಡನ್ ಸೀಲ್ಸ್ ಎಸೆದ 18ನೇ ಓವರ್ನ ಮೊದಲ ಎಸೆತದಲ್ಲಿ ಶೆರ್ಫೇನ್ ರದರ್ಫೋರ್ಡ್ ಭರ್ಜರಿ ಹೊಡೆತಕ್ಕೆ ಮುಂದಾಗಿದ್ದು, ಈ ವೇಳೆ ಚೆಂಡು ಬ್ಯಾಟ್ ಸವರಿ ಮೊದಲ ಸ್ಲಿಪ್ನತ್ತ ಚಿಮ್ಮಿತ್ತು. ಕ್ಷಣಾರ್ಧದಲ್ಲೇ ವಿಕೆಟ್ ಕೀಪರ್ ಜ್ಯುವೆಲ್ ಆ್ಯಂಡ್ರ್ಯೂ ಗಾಳಿಯಲ್ಲಿ ಹಾರಿ ಅದ್ಭುತವಾಗಿ ಚೆಂಡನ್ನು ಹಿಡಿದರು. ಇದೀಗ ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಕ್ರಿಕೆಟ್ ಪ್ರೇಮಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ವಿಕೆಟ್ ಕೀಪರ್ ಜ್ಯುವೆಲ್ ಆ್ಯಂಡ್ರ್ಯೂ ಹಿಡಿದ ಅತ್ಯದ್ಭುತ ಕ್ಯಾಚ್ ವಿಡಿಯೋ ವೈರಲ್ ಆಗಿದೆ. ಅಂಟಿಗುವಾದಲ್ಲಿ ನಡೆದ ಸಿಪಿಎಲ್ನ 3ನೇ ಪಂದ್ಯದಲ್ಲಿ ಬಾರ್ಬಡೋಸ್ ರಾಯಲ್ಸ್ ಹಾಗೂ ಅಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಬಾರ್ಡೋಸ್ ರಾಯಲ್ಸ್ ಪರ 6ನೇ ಕ್ರಮಾಂಕದಲ್ಲಿ ಶೆರ್ಫೇನ್ ರದರ್ಫೋರ್ಡ್ ಕಣಕ್ಕಿಳಿದಿದ್ದರು.
ಜೇಡನ್ ಸೀಲ್ಸ್ ಎಸೆದ 18ನೇ ಓವರ್ನ ಮೊದಲ ಎಸೆತದಲ್ಲಿ ಶೆರ್ಫೇನ್ ರದರ್ಫೋರ್ಡ್ ಭರ್ಜರಿ ಹೊಡೆತಕ್ಕೆ ಮುಂದಾಗಿದ್ದು, ಈ ವೇಳೆ ಚೆಂಡು ಬ್ಯಾಟ್ ಸವರಿ ಮೊದಲ ಸ್ಲಿಪ್ನತ್ತ ಚಿಮ್ಮಿತ್ತು. ಕ್ಷಣಾರ್ಧದಲ್ಲೇ ವಿಕೆಟ್ ಕೀಪರ್ ಜ್ಯುವೆಲ್ ಆ್ಯಂಡ್ರ್ಯೂ ಗಾಳಿಯಲ್ಲಿ ಹಾರಿ ಅದ್ಭುತವಾಗಿ ಚೆಂಡನ್ನು ಹಿಡಿದರು. ಇದೀಗ ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಕ್ರಿಕೆಟ್ ಪ್ರೇಮಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾರ್ಬಡೋಸ್ ರಾಯಲ್ಸ್ ತಂಡವು 20 ಓವರ್ಗಳಲ್ಲಿ 151 ರನ್ ಕಲೆಹಾಕಿದರೆ, ಈ ಗುರಿಯನ್ನು ಅಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ತಂಡ 19.4 ಓವರ್ಗಳಲ್ಲಿ ಚೇಸ್ ಮಾಡಿ 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.

