VIDEO: 8 ಎಸೆತಗಳಲ್ಲಿ 7 ಸಿಕ್ಸ್ ಸಿಡಿಸಿದ ಕೀರನ್ ಪೊಲಾರ್ಡ್
Trinbago Knight Riders vs St Kitts and Nevis Patriots: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟ್ರಿನ್ಬಾಗೊ ನೈಟ್ ರೈಡರ್ಸ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪೊಲಾರ್ಡ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಸಿಡಿಲಬ್ಬರದೊಂದಿಗೆ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅದರಲ್ಲೂ ಸತತ 8 ಎಸೆತಗಳಲ್ಲಿ ಪೊಲಾರ್ಡ್ 7 ಸಿಕ್ಸ್ ಸಿಡಿಸುವ ಮೂಲಕ ಅಬ್ಬರಿಸಿದರು.
ಕೆರಿಬಿಯನ್ ಪ್ರೀಮಿಯರ್ ಲೀಗ್ನಲ್ಲಿ ಕೀರನ್ ಪೊಲಾರ್ಡ್ ಆರ್ಭಟ ಮುಂದುವರೆದಿದೆ. ಕಳೆದ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ್ದ ಪೊಲಾರ್ಡ್ ಇದೀಗ ಮತ್ತೊಮ್ಮೆ ಅಬ್ಬರಿಸಿದ್ದಾರೆ. ಆದರೆ ಈ ಬಾರಿ ಸಿಡಿಲಬ್ಬರ ಎಂಬುದಷ್ಟೇ ವ್ಯತ್ಯಾಸ. ಟ್ರಿನಿಡಾಡ್ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟ್ರಿನ್ಬಾಗೊ ನೈಟ್ ರೈಡರ್ಸ್ ಹಾಗೂ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟ್ರಿನ್ಬಾಗೊ ನೈಟ್ ರೈಡರ್ಸ್ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪೊಲಾರ್ಡ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಸಿಡಿಲಬ್ಬರದೊಂದಿಗೆ ಕೇವಲ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅದರಲ್ಲೂ ಸತತ 8 ಎಸೆತಗಳಲ್ಲಿ ಪೊಲಾರ್ಡ್ 7 ಸಿಕ್ಸ್ ಸಿಡಿಸುವ ಮೂಲಕ ಅಬ್ಬರಿಸಿದರು.
ಈ ಮೂಲಕ 29 ಎಸೆತಗಳಲ್ಲಿ 8 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 65 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನೊಂದಿಗೆ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 179 ರನ್ ಕಲೆಹಾಕಿತು.
180 ರನ್ಗಳ ಗುರಿ ಬೆನ್ನತ್ತಿದ ಸೇಂಟ್ ಕಿಟ್ಸ್ ಅ್ಯಂಡ್ ನೆವಿಸ್ ಪೇಟ್ರಿಯಾಟ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 167 ರನ್ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡ 12 ರನ್ಗಳ ಜಯ ಸಾಧಿಸಿದೆ.
ರೇಣುಕಾಸ್ವಾಮಿ ಕೇಸ್ ಕುರಿತು ‘ಬಾಸ್’ ಸಿನಿಮಾ? ತನುಷ್ ಶಿವಣ್ಣ ಸ್ಪಷ್ಟನೆ
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು

