6,6,6,6,6,6: ಕೀರನ್ ಪೊಲಾರ್ಡ್ ಸಿಡಿಲಬ್ಬರಕ್ಕೆ ತತ್ತರಿಸಿದ ಕಿಂಗ್ಸ್ ಪಡೆ
Saint Lucia Kings vs Trinbago Knight Riders: 188 ರನ್ಗಳ ಕಠಿಣ ಗುರಿ ಬೆನ್ನತ್ತಿದ ಸೇಂಟ್ ಲೂಸಿಯಾ ಕಿಂಗ್ಸ್ ಪರ ಜಾನ್ಸನ್ ಚಾರ್ಲ್ಸ್ 47 ರನ್ ಸಿಡಿಸಿದರು. ಇದಾಗ್ಯೂ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಸೇಂಟ್ ಲೂಸಿಯಾ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 165 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡವು 18 ರನ್ಗಳ ಜಯ ಸಾಧಿಸಿದೆ.
ವೆಸ್ಟ್ ಇಂಡೀಸ್ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್ನ 10ನೇ ಪಂದ್ಯದಲ್ಲಿ ಟ್ರಿನ್ಬಾಗೊ ನೈಟ್ ರೈಡರ್ಸ್ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಕೀರನ್ ಪೊಲಾರ್ಡ್. ಸೇಂಟ್ ಲೂಸಿಯಾದ ಡಾರೆನ್ ಸ್ಯಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟ್ರಿನ್ಬಾಗೊ ನೈಟ್ ರೈಡರ್ಸ್ ಹಾಗೂ ಸೇಂಟ್ ಲೂಸಿಯಾ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಸೇಂಟ್ ಲೂಸಿಯಾ ಕಿಂಗ್ಸ್ ತಂಡದ ನಾಯಕ ಡೇವಿಡ್ ವೀಝ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡಕ್ಕೆ ಕಾಲಿನ್ ಮನ್ರೊ (43) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ನಿಕೋಲಸ್ ಪೂರನ್ 34 ರನ್ಗಳ ಕೊಡುಗೆ ನೀಡಿದರು.
ಇನ್ನು ಐದನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಕೀರನ್ ಪೊಲಾರ್ಡ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಸೇಂಟ್ ಲೂಸಿಯಾ ಕಿಂಗ್ಸ್ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ಪೊಲಾರ್ಡ್ 29 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳನ್ನು ಬಾರಿಸಿದರು. ಅಲ್ಲದೆ 65 ರನ್ ಸಿಡಿಸುವ ಮೂಲಕ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡದ ಮೊತ್ತವನ್ನು 20 ಓವರ್ಗಳಲ್ಲಿ 187 ರನ್ಗಳಿಗೆ ತಂದು ನಿಲ್ಲಿಸಿದರು.
188 ರನ್ಗಳ ಕಠಿಣ ಗುರಿ ಬೆನ್ನತ್ತಿದ ಸೇಂಟ್ ಲೂಸಿಯಾ ಕಿಂಗ್ಸ್ ಪರ ಜಾನ್ಸನ್ ಚಾರ್ಲ್ಸ್ 47 ರನ್ ಸಿಡಿಸಿದರು. ಇದಾಗ್ಯೂ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಸೇಂಟ್ ಲೂಸಿಯಾ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 165 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಟ್ರಿನ್ಬಾಗೊ ನೈಟ್ ರೈಡರ್ಸ್ ತಂಡವು 18 ರನ್ಗಳ ಜಯ ಸಾಧಿಸಿದೆ.

