ಮೊಹಮ್ಮದ್ ಅಮೀರ್ ಮಿಂಚಿನ ದಾಳಿ: ಗೆದ್ದು ಬೀಗಿದ TKR

Updated on: Aug 28, 2025 | 11:54 AM

Trinbago Knight Riders vs Antigua and Barbuda Falcons: 147 ರನ್​ಗಳ ಸುಲಭ ಗುರಿ ಬೆನ್ನತ್ತಿದ ಟ್ರಿನ್​ಬಾಗೊ ನೈಟ್ ರೈಡರ್ಸ್ ಪರ ಅಲೆಕ್ಸ್ ಹೇಲ್ಸ್ 55 ರನ್ ಬಾರಿಸಿದರೆ, ಕೀಸಿ ಕಾರ್ಟಿ 60 ರನ್ ಚಚ್ಚಿದರು. ಈ ಮೂಲಕ 18.2 ಓವರ್​ಗಳಲ್ಲಿ 152 ರನ್​ಗಳಿಸಿ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇನ್ನು ಈ ಪಂದ್ಯದಲ್ಲಿ ಮಿಂಚಿನ ದಾಳಿ ಸಂಘಟಿಸಿದ ಮೊಹಮ್ಮದ್ ಅಮೀರ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿರುವ ಕೆರಿಬಿಯನ್ ಪ್ರೀಮಿಯರ್ ಲೀಗ್​ನ 14ನೇ ಪಂದ್ಯದಲ್ಲಿ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟ್ರಿನ್​ಬಾಗೊ ನೈಟ್ ರೈಡರ್ಸ್ ಹಾಗೂ ಅಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡದ ನಾಯಕ ನಿಕೋಲಸ್ ಪೂರನ್ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಮೊಹಮ್ಮದ್ ಅಮೀರ್ ಅಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಯಶಸ್ವಿಯಾದರು.

ಅಲ್ಲದೆ 4 ಓವರ್​ಗಳನ್ನು ಎಸೆದ ಮೊಹಮ್ಮದ್ ಅಮೀರ್ ಕೇವಲ 22 ರನ್ ನೀಡಿ 3 ಪ್ರಮುಖ ವಿಕೆಟ್ ಕಬಳಿಸಿದರು. ಪರಿಣಾಮ ಅಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 146 ರನ್ ಕಲೆಹಾಕಿತು.

147 ರನ್​ಗಳ ಸುಲಭ ಗುರಿ ಬೆನ್ನತ್ತಿದ ಟ್ರಿನ್​ಬಾಗೊ ನೈಟ್ ರೈಡರ್ಸ್ ಪರ ಅಲೆಕ್ಸ್ ಹೇಲ್ಸ್ 55 ರನ್ ಬಾರಿಸಿದರೆ, ಕೀಸಿ ಕಾರ್ಟಿ 60 ರನ್ ಚಚ್ಚಿದರು. ಈ ಮೂಲಕ 18.2 ಓವರ್​ಗಳಲ್ಲಿ 152 ರನ್​ಗಳಿಸಿ ಟ್ರಿನ್​ಬಾಗೊ ನೈಟ್ ರೈಡರ್ಸ್ ತಂಡವು 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಇನ್ನು ಈ ಪಂದ್ಯದಲ್ಲಿ ಮಿಂಚಿನ ದಾಳಿ ಸಂಘಟಿಸಿದ ಮೊಹಮ್ಮದ್ ಅಮೀರ್ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.