ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು

Updated on: Feb 07, 2025 | 1:02 PM

ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶೇಷಗಿರಿ ಗ್ರಾಮದಲ್ಲಿ ಗಂಗಾಪರಮೇಶ್ವರಿ ದೇವಸ್ಥಾನದ ಕಳಸಾರೋಹಣ ಸಮಯದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕ್ರೇನ್‌ನ ಬಕೆಟ್ ಕುಸಿದು ಬಿದ್ದ ಪರಿಣಾಮ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕ್ರೇನ್ ಮಾಲೀಕರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾವೇರಿ, ಫೆಬ್ರವರಿ 07: ಹಾನಗಲ್ (Hangal) ತಾಲೂಕು ಶೇಷಗಿರಿ ಗ್ರಾಮದಲ್ಲಿನ ಗಂಗಾಪರಮೇಶ್ವರಿ ಕಳಸಾರೋಹಣ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಕ್ರೇನ್​ನ ಬಕೇಟ್ ಮುರಿದು ಕೆಳಗೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವನಿಗೆ ಗಂಭೀರವಾಗಿ ಗಾಯವಾಗಿದೆ. ಮಂಜು ಪಾಟೀಲ (42) ಮೃತ ದುರ್ದೈವಿ. ಮಂಜು ಬಡಿಗೇರ್ ಗಂಭೀರವಾಗಿ ಗಾಯಗೊಂಡಿದ್ದು, ಹಾನಗಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ರೇನ್​ನ ಮೂಲಕ ಕಳಸ ಸ್ಥಾಪನೆ ಕಾರ್ಯ ನಡೆದಾಗ ಕ್ರೇನ್​ ಬಕೆಟ್​ ಮುರಿದು ಇಬ್ಬರೂ ಕೆಳಗೆ ಬಿದ್ದಿದ್ದಾರೆ. ಅಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ. ಕ್ರೇನ್ ಮಾಲೀಕನ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಿ: ಅಣ್ಣಪ್ಪ ಬಾರ್ಕಿ