AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಆಂಧ್ರಪ್ರದೇಶದಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಬಸ್, ಕೂಡಲೇ ಹೊತ್ತಿಕೊಂಡ ಬೆಂಕಿ, ಮೂವರು ಸಜೀವ ದಹನ

Video: ಆಂಧ್ರಪ್ರದೇಶದಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಬಸ್, ಕೂಡಲೇ ಹೊತ್ತಿಕೊಂಡ ಬೆಂಕಿ, ಮೂವರು ಸಜೀವ ದಹನ

ನಯನಾ ರಾಜೀವ್
|

Updated on: Jan 22, 2026 | 9:24 AM

Share

ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಖಾಸಗಿ ಬಸ್ಸೊಂದು ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಮೂವರು ಸಾವನ್ನಪ್ಪಿದ್ದಾರೆ. ಈ ಅಪಘಾತ ಸುಮಾರು ಬೆಳಗಿನ ಜಾವ 1.30 ರ ಸುಮಾರಿಗೆ ಸಂಭವಿಸಿದೆ. ಆಂಧ್ರಪ್ರದೇಶದ ನೆಲ್ಲೂರಿನಿಂದ ತೆಲಂಗಾಣದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಬಸ್‌ನ ಬಲಭಾಗದ ಟೈರ್ ಸ್ಫೋಟಗೊಂಡಿತ್ತು.

ನಂದ್ಯಾಲ್, ಜನವರಿ 22: ಆಂಧ್ರಪ್ರದೇಶದ ನಂದ್ಯಾಲ್ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ಖಾಸಗಿ ಬಸ್ಸೊಂದು ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಮೂವರು ಸಾವನ್ನಪ್ಪಿದ್ದಾರೆ. ಈ ಅಪಘಾತ ಸುಮಾರು ಬೆಳಗಿನ ಜಾವ 1.30 ರ ಸುಮಾರಿಗೆ ಸಂಭವಿಸಿದೆ. ಆಂಧ್ರಪ್ರದೇಶದ ನೆಲ್ಲೂರಿನಿಂದ ತೆಲಂಗಾಣದ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದ ಬಸ್‌ನ ಬಲಭಾಗದ ಟೈರ್ ಸ್ಫೋಟಗೊಂಡಿತ್ತು.

ಹಠಾತ್ ಸ್ಫೋಟದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ, ವಾಹನವು ರಸ್ತೆ ವಿಭಜಕವನ್ನು ಹಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೇನರ್ ಲಾರಿಗೆ ಡಿಕ್ಕಿ ಹೊಡೆದಿದೆ. ಲಾರಿ ಬೈಕ್​ಗಳನ್ನು ಸಾಗಿಸುತ್ತಿತ್ತು. ಪರಿಣಾಮ ಬಸ್ ಮತ್ತು ಟ್ರಕ್ ಎರಡೂ ಬೆಂಕಿಗೆ ಆಹುತಿಯಾದವು. ಪ್ರದೇಶದ ನಿವಾಸಿಗಳು, ಬಸ್ ಕ್ಲೀನರ್ ಮತ್ತು ಬಸ್ ಕಂಡಕ್ಟರ್ ಕಿಟಕಿಗಳನ್ನು ಒಡೆದು ಒಳಗೆ ಸಿಲುಕಿದ್ದ ಪ್ರಯಾಣಿಕರನ್ನು ರಕ್ಷಿಸಲು ಸಹಾಯ ಮಾಡಿದರು. ಬಸ್ ಚಾಲಕ, ಟ್ರಕ್ ಚಾಲಕ ಮತ್ತು ಕ್ಲೀನರ್​ ಸುಟ್ಟ ಗಾಯಗಳಿಂದ ಸಾವನ್ನಪ್ಪಿದ್ದಾರೆ.

ನಂತರ ಅವರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಎಲ್ಲಾ ಪ್ರಯಾಣಿಕರು ಬದುಕುಳಿದಿದ್ದಾರೆ. 36 ಪ್ರಯಾಣಿಕರಲ್ಲಿ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ