ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್

Edited By:

Updated on: Aug 16, 2026 | 10:08 AM

ಇತ್ತೀಚಿನ ವರ್ಷಗಳಲ್ಲಿ ರವಿಚಂದ್ರನ್ ಅವರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆಯಾ ಎಂಬ ಪ್ರಶ್ನೆ ಹಲವರಿಗೆ ಇದೆ. ಅಲ್ಲದೇ, ಅವರು ಮನೆ ಮಾರಿಕೊಂಡಿದ್ದಾರೆ ಎಂಬ ಮಾತು ಕೂಡ ಕೇಳಿಬಂದಿದೆ. ಅವರನ್ನು ಹತ್ತಿರದಿಂದ ಕಂಡ ಅಪ್ಪಟ ಅಭಿಮಾನಿ ದಿಲ್ ಸೇ ದಿಲೀಪ್ ಅವರು ಈ ಬಗ್ಗೆ ಮಾತನಾಡಿದ್ದಾರೆ.

ಒಂದು ಕಾಲದಲ್ಲಿ ನಟ ರವಿಚಂದ್ರನ್ (Ravichandran) ಅವರು ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡಿದ್ದರು. ಸಾವಿರಾರು ಜನರಿಗೆ ಅವರು ಕೆಲಸ ನೀಡಿದ್ದರು. ಸಿನಿಮಾಗಾಗಿ ಲೆಕ್ಕವೇ ಇಲ್ಲದಷ್ಟು ಹಣ ಖರ್ಚು ಮಾಡುತ್ತಿದ್ದ ನಟ, ನಿರ್ದೇಶಕ, ನಿರ್ಮಾಪಕ ಅವರು. ಆದರೆ ಇತ್ತೀಚಿನ ವರ್ಷಗಳಲ್ಲಿ ರವಿಚಂದ್ರನ್ ಅವರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆಯಾ ಎಂಬ ಪ್ರಶ್ನೆ ಹಲವರಿಗೆ ಇದೆ. ಅಲ್ಲದೇ, ಅವರು ಮನೆ ಮಾರಿಕೊಂಡಿದ್ದಾರೆ ಎಂಬ ಮಾತು ಕೂಡ ಕೇಳಿಬಂದಿದೆ. ಅವರನ್ನು ಹತ್ತಿರದಿಂದ ಕಂಡ ಅಪ್ಪಟ ಅಭಿಮಾನಿ ದಿಲ್ ಸೇ ದಿಲೀಪ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ಅದೆಲ್ಲ ಸುಳ್ಳು. ವದಂತಿ ಇದ್ದೇ ಇರುತ್ತದೆ. ರವಿಚಂದ್ರನ್ ಅವರು ಮನೆ ಮಾರಿಲ್ಲ. ಅವರು ಏನನ್ನೂ ಕಳೆದುಕೊಂಡಿಲ್ಲ. ಯೂಟ್ಯೂಬ್, ಫೇಸ್​ಬುಕ್​ನಲ್ಲಿ ಇರುವವರು ಮಾರಿದ್ದಾರೆ. ರವಿಚಂದ್ರನ್ ಸರ್ ಹೆಸರಲ್ಲಿ ಇರುವುದನ್ನು ಇವರೆಲ್ಲಾ ಸೈನ್ ಹಾಕಿ ಮಾಡಿದ್ದಾರೆ’ ಎಂದು ದಿಲ್ ಸೇ ದಿಲೀಪ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More