AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಬಾರಿ ಮಳೆಗಾಲದಲ್ಲಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ

ಈ ಬಾರಿ ಮಳೆಗಾಲದಲ್ಲಿ ತುಂಬಿದ ಕರ್ನಾಟಕದ ಮೊದಲ ಡ್ಯಾಂನ ಭೋರ್ಗರೆತ ಹೇಗಿದೆ ನೋಡಿ

Basavaraj Yaraganavi
| Edited By: |

Updated on: Jul 05, 2026 | 4:23 PM

Share

ಮುಖ್ಯಾಂಶಗಳು

  • ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿ
  • ಈ ಬಾರಿ ಮಳೆಗಾಲದಲ್ಲಿ ತುಂಬಿದ ಕರ್ನಾಟಕದ ಮೊದಲ ಡ್ಯಾಂ
  • 10 ಗೇಟ್ ಓಪನ್ ಮಾಡಿ 20 ಸಾವಿರ ಕ್ಯೂಸೆಕ್ ನೀರು ನದಿಗೆ

ಜೂನ್ ತಿಂಗಳಲ್ಲಿ ಮುಂಗಾರು ಮಳೆ ಕೊರತೆಯಿಂದ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಸೇರಿದಂತೆ ಹಲವು ಜಲಾಶಯಗಳು ಬತ್ತಿ ಹೋಗಿವೆ. ಆದ್ರೆ, ಜುಲೈ ಆರಂಭದಲ್ಲಿ ಮಲೆನಾಡು ಭಾಗದಲ್ಲಿ ಕ್ರಮೇಣ ಮುಂಗಾರು ಮಳೆ ಚುರುಕುಗೊಳ್ಳಲಾರಂಭಿಸಿದೆ. ಹೀಗಾಗಿ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದೆ. 3.24 ಟಿಎಂಸಿ ಸಾಮರ್ಥ್ಯ ಗಾಜನೂರಿನ ತುಂಗಾ ಜಲಾಶಯವು ಪ್ರತಿ ವರ್ಷ ಜೂನ್ ಮೊದಲ ವಾರದಲ್ಲಿ ಭರ್ತಿಯಾಗುತ್ತಿತ್ತು. ಆದ್ರೆ ಬಾರಿ ಆರಂಭದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಒಂದು ತಿಂಗಳು ತಡವಾಗಿ ಅಂದ್ರೆ ಜುಲೈ ಮೊದಲ ವಾರದಲ್ಲಿ ತುಂಗಾ ಜಲಾಶಯ ತುಂಬಿದೆ.

ಶಿವಮೊಗ್ಗ (ಜುಲೈ 05): ಜೂನ್ ತಿಂಗಳಲ್ಲಿ ಮುಂಗಾರು ಮಳೆ ಕೊರತೆಯಿಂದ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಸೇರಿದಂತೆ ಹಲವು ಜಲಾಶಯಗಳು ಬತ್ತಿ ಹೋಗಿವೆ. ಆದ್ರೆ, ಜುಲೈ ಆರಂಭದಲ್ಲಿ ಮಲೆನಾಡು ಭಾಗದಲ್ಲಿ ಕ್ರಮೇಣ ಮುಂಗಾರು ಮಳೆ ಚುರುಕುಗೊಳ್ಳಲಾರಂಭಿಸಿದೆ. ಹೀಗಾಗಿ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯ (Shivamogga Tunga reservoir) ಭರ್ತಿಯಾಗಿದೆ. 3.24 ಟಿಎಂಸಿ ಸಾಮರ್ಥ್ಯ ಗಾಜನೂರಿನ ತುಂಗಾ ಜಲಾಶಯವು ಪ್ರತಿ ವರ್ಷ ಜೂನ್ ಮೊದಲ ವಾರದಲ್ಲಿ ಭರ್ತಿಯಾಗುತ್ತಿತ್ತು. ಆದ್ರೆ ಬಾರಿ ಆರಂಭದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಒಂದು ತಿಂಗಳು ತಡವಾಗಿ ಅಂದ್ರೆ ಜುಲೈ ಮೊದಲ ವಾರದಲ್ಲಿ ತುಂಗಾ ಜಲಾಶಯ ತುಂಬಿದೆ. ಇದರಿಂದ 10 ಗೇಟ್ ಓಪನ್ ಮಾಡಿ 20 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿಬಿಡಲಾಗಿದೆ. ಇದರೊಂದಿಗೆ ಈ ಬಾರಿಯ ಮಳೆಗಾಲದಲ್ಲಿ ತುಂಬಿದ ಕರ್ನಾಟಕದ ಮೊದಲ ಡ್ಯಾಂ ಇದಾಗಿದ್ದು, ಭೋರ್ಗರೆತ ಹೇಗಿದೆ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us