ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಹೆಚ್ಚುತ್ತಲೇ ಇದೆ: ಹೆಚ್ ಡಿ ಕುಮಾರಸ್ವಾಮಿ

Updated on: Apr 19, 2024 | 7:51 PM

ಒಂದು ನಿರ್ದಿಷ್ಟ ವರ್ಗದ ಓಲೈಕೆಯಲ್ಲಿ ತೊಡಗಿರುವುದರಿಂದ ಮತ್ತು ತಪ್ಪಿತಸ್ಥರ ವಿರುದ್ಧ ಸೂಕ್ತ ಜರುಗಿಸದ ಕಾರಣ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಪ್ರಮಾಣ ಏರುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು. ಒಂದು ಸಮುದಾಯದ ವೋಟು ಗಿಟ್ಟಸಲು ಈ ಸರ್ಕಾರ ಅಡಳಿತವನ್ನು ಅಧೋಗತಿಗೆ ಕೊಂಡೊಯ್ದಿದೆ, ಜನ ಈಗ ತೀರ್ಮಾನಿಸಬೇಕಾದ ಅವಶ್ಯಕತೆಯಿದೆ ಎಂದು ಕುಮಾರಸ್ವಾಮಿ ಹೇಳಿದರು.

ಚಿತ್ರದುರ್ಗ: ಜಿಲ್ಲೆಯ ಪರಶುರಾಂಪುರದಲ್ಲಿ ಚಿತ್ರದುರ್ಗಾ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪರ ಪ್ರಚಾರ ಭಾಷಣ ಮಾಡಿದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಕೊಲೆಗಳ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದರು. ನಿನ್ನೆ ಹುಬ್ಬಳ್ಳಿ (Hubballi) ಮತ್ತು ಗದಗನಲ್ಲಿ (Gadag) ನಡೆದ ಭೀಕರ ಹತ್ಯೆಗಳನ್ನು ಉಲ್ಲೇಖಿಸಿದ ಅವರು, ಗದಗನಲ್ಲಿ ಮನೆ ನುಗ್ಗಿದ ಹಂತಕರು ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡುತ್ತಾರೆ ಮತ್ತು ಹುಬ್ಬಳ್ಳಿಯ ಕಾಲೇಜು ಅವರಣದಲ್ಲಿ ಕೊಲೆ ನಡೆಯುತ್ತದೆ ಅಂದರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ಮಟ್ಟಿಗೆ ಕುಸಿದಿದೆ ಮತ್ತು ಆಡಳಿತ ಯಂತ್ರ ಹೇಗೆ ಕೆಲಸ ಮಾಡುತ್ತಿದೆ ಅನ್ನೋದನ್ನು ಅರ್ಥಮಾಡಿಕೊಳ್ಳಬಹುದು ಎಂದು ಕುಮಾರಸ್ವಾಮಿ ಹೇಳಿದರು.

ಅಪರಾಧಗಳ ಸರಿಯಾದ ತನಿಖೆ ನಡೆಸುವ ಬದಲು ಸರ್ಕಾರ ಉಡಾಫೆಯ ಉತ್ತರಗಳನ್ನು ನೀಡುತ್ತದೆ. ಒಂದು ನಿರ್ದಿಷ್ಟ ವರ್ಗದ ಓಲೈಕೆಯಲ್ಲಿ ತೊಡಗಿರುವುದರಿಂದ ಮತ್ತು ತಪ್ಪಿತಸ್ಥರ ವಿರುದ್ಧ ಸೂಕ್ತ ಜರುಗಿಸದ ಕಾರಣ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಪ್ರಮಾಣ ಏರುತ್ತಿದೆ ಎಂದು ಕುಮಾರಸ್ವಾಮಿ ಹೇಳಿದರು. ಒಂದು ಸಮುದಾಯದ ವೋಟು ಗಿಟ್ಟಸಲು ಈ ಸರ್ಕಾರ ಅಡಳಿತವನ್ನು ಅಧೋಗತಿಗೆ ಕೊಂಡೊಯ್ದಿದೆ, ಜನ ಈಗ ತೀರ್ಮಾನಿಸಬೇಕಾದ ಅವಶ್ಯಕತೆಯಿದೆ ಎಂದು ಕುಮಾರಸ್ವಾಮಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನಮ್ಮ ಪಕ್ಷದೊಂದಿಗೆ ಬೆಳೆದ ಚಲುವರಾಯಸ್ವಾಮಿ ಈಗ ಕಾಂಗ್ರೆಸ್ ಸೇನಾನಾಯಕನಂತೆ ಓಡಾಡುತ್ತಾರೆ: ಕುಮಾರಸ್ವಾಮಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More