ರೈತನ ಹೊಲದಲ್ಲಿ ಮೊಸಳೆ ಪ್ರತ್ಯಕ್ಷ; ಗ್ರಾಮಸ್ಥರೇ ಸೆರೆ ಹಿಡಿದು ಅರಣ್ಯ ಇಲಾಖೆ ಸಿಬ್ಬಂದಿಗೆ ಹಸ್ತಾಂತರ

Edited By: ಕಿರಣ್ ಹನುಮಂತ್​ ಮಾದಾರ್

Updated on: Jul 11, 2023 | 12:57 PM

ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಜನವಾಡ ಗ್ರಾಮದ ಪುಂಡಲೀಕ ಚಿಕ್ಕಲಕಿ ಎಂಬ ರೈತರ ಹೊಲದಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರೇ ಸೇರಿ ಹಿಡಿದು ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಹಸ್ತಾಂತರ ಮಾಡಿದ್ದಾರೆ.

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಜನವಾಡ ಗ್ರಾಮದ ಪುಂಡಲೀಕ ಚಿಕ್ಕಲಕಿ ಎಂಬ ರೈತರ ಹೊಲದಲ್ಲಿ ಮೊಸಳೆ(Crocodile) ಪ್ರತ್ಯಕ್ಷವಾಗಿತ್ತು. ಕೆಲ ದಿನಗಳಿಂದ ಹೊಲದ ಬಾವಿಯಲ್ಲಿಯೇ ಬೀಡು ಬಿಟ್ಟಿದ್ದ ‌ಮೊಸಳೆ, ಇದೀಗ ಹೊರಬರುತ್ತಿದ್ದಂತೆ ಗ್ರಾಮಸ್ಥರು ಸೆರೆ ಹಿಡಿದಿದ್ದಾರೆ. ಬರೊಬ್ಬರಿ ಎಂಟು ಅಡಿ ಉದ್ದ ಹಾಗೂ ಎರಡು ಕ್ವಿಂಟಾಲ್ ತೂಕವಿದೆ. ಇನ್ನು ಮೊಸಳೆ ಹಿಡಿಯುವ ಬರದಲ್ಲಿ ರಾಡ್​ಗೆ ಕಟ್ಟಿ ದರ ದರನೆ ಎಳೆದೊಯ್ಯುವ ಮೂಲಕ ಯುವಕರು ಮೊಸಳೆಗೆ ಹಿಂಸೆ ನೀಡಿದ್ದಾರೆ. ನಂತರ ಜಮಖಂಡಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮೊಸಳೆ ಹಸ್ತಾಂತರಿಸಿದ್ದು, ಮೊಸಳೆಯನ್ನು ಆಲಮಟ್ಟಿ ಜಲಾಶಯಕ್ಕೆ ಬಿಡಲಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 11, 2023 12:48 PM
Follow Us
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More