ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಹೆಚ್.ಕೆ ಸುರೇಶ್ ಪ್ರಮಾಣ!

Edited By:

Updated on: Jun 30, 2026 | 1:31 PM

ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ (ಕ್ರಾಸ್ ವೋಟಿಂಗ್) ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ, ಹಾಸನ ಜಿಲ್ಲೆಯ ಬೇಲೂರು ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಕೆ.ಸುರೇಶ್ ಅವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ. ಇಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದ ಶಾಸಕರು, ದೇವರ ಮುಂದೆ ಮುಷ್ಟಿ ಕಾಣಿಕೆ ಹಾಕಿ ಪ್ರಾರ್ಥಿಸಿದರು. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ. ನಾನು ಈಗಲೂ, ಮುಂದೆಯೂ ಬಿಜೆಪಿಯಲ್ಲೇ ಇರುತ್ತೇನೆ. ಶಾಸಕನಾಗಿ ಆಯ್ಕೆಯಾದಾಗಿನಿಂದ ಕಾಯಾ ವಾಚಾ ಮನಸಾ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇನೆ ಎಂದು ದೇವರ ಎದುರು ಅಡ್ಡಮತದಾನದ ಅಪವಾದವನ್ನು ನಿರಾಕರಿಸಿ ಸುರೇಶ್ ಭಾವನಾತ್ಮಕವಾಗಿ ಪ್ರಮಾಣ ಮಾಡಿದ್ದಾರೆ.

ಮಂಗಳೂರು, ಜೂನ್ 30: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡಮತದಾನ (ಕ್ರಾಸ್ ವೋಟಿಂಗ್) ನಡೆದಿದೆ ಎಂಬ ಆರೋಪಗಳ ಬೆನ್ನಲ್ಲೇ, ಹಾಸನ ಜಿಲ್ಲೆಯ ಬೇಲೂರು ಕ್ಷೇತ್ರದ ಬಿಜೆಪಿ ಶಾಸಕ ಹೆಚ್.ಕೆ.ಸುರೇಶ್ ಅವರು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡಿದ್ದಾರೆ.

ಇಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದ ಶಾಸಕರು, ದೇವರ ಮುಂದೆ ಮುಷ್ಟಿ ಕಾಣಿಕೆ ಹಾಕಿ ಪ್ರಾರ್ಥಿಸಿದರು. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ. ನಾನು ಈಗಲೂ, ಮುಂದೆಯೂ ಬಿಜೆಪಿಯಲ್ಲೇ ಇರುತ್ತೇನೆ. ಶಾಸಕನಾಗಿ ಆಯ್ಕೆಯಾದಾಗಿನಿಂದ ಕಾಯಾ ವಾಚಾ ಮನಸಾ ಪಕ್ಷಕ್ಕಾಗಿ ಕೆಲಸ ಮಾಡುತ್ತಿದ್ದೇನೆ ಎಂದು ದೇವರ ಎದುರು ಅಡ್ಡಮತದಾನದ ಅಪವಾದವನ್ನು ನಿರಾಕರಿಸಿ ಸುರೇಶ್ ಭಾವನಾತ್ಮಕವಾಗಿ ಪ್ರಮಾಣ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More