ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಶಾಸಕರ ಅಡ್ಡಮತದಾನ ಮಾಡಿರುವುದು ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದನ್ನು ಹೈಕಮಾಂಡ್ ಸಹ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಅವರನ್ನು ದೆಹಲಿಗೆ ಕರೆಯಿಸಿಕೊಂಡು ಎಲ್ಲಾ ಮಾಹಿತಿ ಪಡೆದುಕೊಂಡಿದೆ. ಆದ್ರೆ, ಇತ್ತ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿವೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಕೆಲ ಶಾಸಕರು ಅಡ್ಡಮತದಾನ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಬೆಂಗಳೂರು, (ಜೂನ್ 26): ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ ಶಾಸಕರ ಅಡ್ಡಮತದಾನ ಮಾಡಿರುವುದು ಬಿಜೆಪಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಇದನ್ನು ಹೈಕಮಾಂಡ್ ಸಹ ಗಂಭೀರವಾಗಿ ಪರಿಗಣಿಸಿದ್ದು, ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್ ಅಶೋಕ್ ಅವರನ್ನು ದೆಹಲಿಗೆ ಕರೆಯಿಸಿಕೊಂಡು ಎಲ್ಲಾ ಮಾಹಿತಿ ಪಡೆದುಕೊಂಡಿದೆ. ಆದ್ರೆ, ಇತ್ತ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿವೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಕೆಲ ಶಾಸಕರು ಅಡ್ಡಮತದಾನ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಈ ಬಗ್ಗೆ ಮಾಜಿ ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯಿಸಿದ್ದು, ಕೆಲ ಮೀರ್ ಸಾದಿಕ್‌ರು ಹಣ ಪಡೆದು ಅಡ್ಡಮತದಾನ ಮಾಡಿದ್ದಾರೆ. ವಿಜಯೇಂದ್ರ ರಾಜ್ಯ ಬಿಜೆಪಿ ಅಧ್ಯಕ್ಷ ಆಗಿದ್ದನ್ನು ಸಹಿಸಲು ಆಗುತ್ತಿಲ್ಲ. ವಿಜಯೇಂದ್ರ ಮುಖಕ್ಕೆ ಮಸಿ ಬಳಿಯುವ ಷಡ್ಯಂತ್ರ ಮಾಡ್ತಿದ್ದಾರೆ ಎಂದು ಮತ್ತೆ ಯಡಿಯೂರಪ್ಪ ವಿರೋಧಿ ಬಣದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೇ ಪರೋಕ್ಷವಾಗಿ ವಿಜಯೇಂದ್ರ ಅವರನ್ನ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಈ ರೀತಿ ಷಡ್ಯಂತ್ರ ಮಾಡಿದ್ದಾರೆ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
