ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು! ವಿಡಿಯೋ ನೋಡಿ

Updated on: Mar 04, 2026 | 3:36 PM

ದಿನಾ ಭದ್ರತೆಯ ಕರ್ತವ್ಯದಲ್ಲಿರುವ, ಮೈಯೆಲ್ಲಾ ಕಣ್ಣಾಗಿಸಿ ಗಡಿ ಕಾಯುವ ಸಿಆರ್​ಪಿಎಫ್ ಯೋಧರು ಇಂದು ಹೋಳಿ ಹಬ್ಬದ ಸಂಬ್ರಮದಲ್ಲಿ ಮುಳುಗೆದ್ದಿರುವುದು ಗಮನ ಸೆಳೆದಿದೆ. ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಯೋಧರು ಬಣ್ಣ ಹಚ್ಚಿಕೊಂಡು, ಪರಸ್ಪರ ಸಂಭ್ರಮಿಸಿಕೊಂಡು ಕುಣಿದುಕುಪ್ಪಳಿಸಿದ ವಿಡಿಯೋ ಇದೀಗ ವೈರಲ್ ಆಗುತ್ತಿದ್ದು, ಗಮನ ಸೆಳೆದಿದೆ.

ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ CRPF 38ನೇ ಬೆಟಾಲಿಯನ್ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದೆ. ಕರ್ತವ್ಯ ನಿರ್ವಹಿಸುತ್ತಿರುವ ಮಧ್ಯೆಯೇ ಯೋಧರು ಬಣ್ಣ ಹಚ್ಚಿಕೊಂಡು ಹಬ್ಬದ ಸಂಭ್ರಮದಲ್ಲಿ ಭಾಗಿಯಾದರು. ಈ ಕುರಿತು CRPF 38ನೇ ಬೆಟಾಲಿಯನ್ ಇನ್ಸ್‌ಪೆಕ್ಟರ್ ರಾಜ್ ಸಿಂಗ್ ಮಾತನಾಡಿ, ‘ನಾವು ಇಲ್ಲಿ ನಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದೇವೆ. ಜತೆಗೆ ಹೋಳಿ ಹಬ್ಬವನ್ನು ಸಹ ಆಚರಿಸುತ್ತಿದ್ದೇವೆ’ ಎಂದು ತಿಳಿಸಿದ್ದಾರೆ. ಭದ್ರತಾ ಕರ್ತವ್ಯಗಳ ನಡುವೆಯೂ ಯೋಧರು ಹಬ್ಬದ ಸಂಭ್ರಮದಿಂದ ಕುಣಿದು ಕುಪ್ಪಳಿಸಿದ ವಿಡಿಯೋ ಗಮನ ಸೆಳೆದಿದೆ.

ವಿಡಿಯೋ ಕೃಪೆ: ಎಎನ್​ಐ

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More