ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Updated on: Apr 26, 2026 | 10:34 AM

ನಗರದ ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೀದಿ ನಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ನಿನ್ನೆ(ಏ.25) ಬೆಳಿಗ್ಗೆ 8.30ರ ಸುಮಾರಿಗೆ ಎಳೆನೀರು ವ್ಯಾಪಾರಿಯೊಬ್ಬನು ಮಚ್ಚಿನಿಂದ ನಾಯಿಯ ಮೇಲೆ ದಾಳಿ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಿರಿಯ ನಾಗರಿಕರೊಬ್ಬರು ಸಾಕಿಕೊಂಡಿದ್ದ ಈ ಬೀದಿ ನಾಯಿಯಿಂದ ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವ್ಯಾಪಾರಿ, ಎಳೆನೀರು ಕೊಚ್ಚುವ ಮಚ್ಚಿನಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ. ಘಟನೆಯಿಂದ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ. ವಿಕಾಸ್ ನೀಡಿದ ದೂರಿನ ಆಧಾರದ ಮೇಲೆ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಬೆಂಗಳೂರು, ಏಪ್ರಿಲ್ 26: ನಗರದ ಕೆ.ಆರ್. ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೀದಿ ನಾಯಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಘಟನೆ ಬೆಳಕಿಗೆ ಬಂದಿದೆ. ನಿನ್ನೆ(ಏ.25) ಬೆಳಿಗ್ಗೆ 8.30ರ ಸುಮಾರಿಗೆ ಎಳೆನೀರು ವ್ಯಾಪಾರಿಯೊಬ್ಬನು ಮಚ್ಚಿನಿಂದ ನಾಯಿಯ ಮೇಲೆ ದಾಳಿ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಿರಿಯ ನಾಗರಿಕರೊಬ್ಬರು ಸಾಕಿಕೊಂಡಿದ್ದ ಈ ಬೀದಿ ನಾಯಿಯಿಂದ ತೊಂದರೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ವ್ಯಾಪಾರಿ, ಎಳೆನೀರು ಕೊಚ್ಚುವ ಮಚ್ಚಿನಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾನೆ. ಘಟನೆಯಿಂದ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದೆ. ವಿಕಾಸ್ ನೀಡಿದ ದೂರಿನ ಆಧಾರದ ಮೇಲೆ ಕೆ.ಆರ್. ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More