AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CT Ravi in Kalaburagi: ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಬಿಜೆಪಿ ಶಾಸಕ ತಡಬಡಾಯಿಸಿದರು!

CT Ravi in Kalaburagi: ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ಬಿಜೆಪಿ ಶಾಸಕ ತಡಬಡಾಯಿಸಿದರು!

ಅರುಣ್​ ಕುಮಾರ್​ ಬೆಳ್ಳಿ
|

Updated on:Mar 14, 2023 | 4:13 PM

Share

ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಸರ್ಕಾರ ನೀಡಿರುವ ಕೊಡುಗೆಯೇನು, ಕೇವಲ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚಿಸಿದರೆ, ಪ್ರದೇಶದ ಸಮಸ್ಯೆಗಳು ನೀಗುತ್ತವೆಯೇ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ರವಿ ಮಾತು ಬದಲಾಯಿಸುವ ಪ್ರಯತ್ನ ಮಾಡಿದರು

ಕಲಬುರಗಿ: ಬಿಜೆಪಿಯ ವಿಜಯ ಸಂಕಲ್ಪ ಭಾಗವಾಗಿ ಕಲಬುರಗಿ ಜಿಲ್ಲೆಯ ಪ್ರವಾಸದಲ್ಲಿರುವ ಶಾಸಕ ಮತ್ತು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ (CT Ravi) ನಗರದ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಲು ತಡಬಡಾಯಿಸಿದರು ಮತ್ತು ಒಂದೆರಡು ಸಲ ಇಕ್ಕಟ್ಟಿಗೂ ಸಿಕ್ಕರು. ಕಲ್ಯಾಣ ಕರ್ನಾಟಕಕ್ಕೆ (Kalyana Karnataka) ಬಿಜೆಪಿ ಸರ್ಕಾರ ನೀಡಿರುವ ಕೊಡುಗೆಯೇನು, ಕೇವಲ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚಿಸಿದರೆ, ಪ್ರದೇಶದ ಸಮಸ್ಯೆಗಳು ನೀಗುತ್ತವೆಯೇ ಎಂದು ಪತ್ರಕರ್ತರು ಪ್ರಶ್ನಿಸಿದಾಗ, ರವಿ ಮಾತು ಬದಲಾಯಿಸುವ ಪ್ರಯತ್ನ ಮಾಡಿದರು. ಕೆಲ ಜನ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ (Kalyana Karnataka Development Board) ರಚಿಸಿದ ನಂತರ ಸಾಕಷ್ಟು ಬದಲಾವಣೆಗಳಾಗಿವೆ, ರಸ್ತೆಗಳ ಗುಣಮಟ್ಟ ಸುಧಾರಿಸಿದೆ, ಮಕ್ಕಳಿಗೆ ಒಳ್ಳೆಯ ಶಿಕ್ಷಣ ಸಿಗುತ್ತಿದೆ ಅಂತ ಹೇಳುತ್ತಿದ್ದಾರೆ ಅಂತ ರವಿಯವರು ಹೇಳಿದಾಗ ಪ್ರತಿನಿಧಿಗಳು ಮತ್ತಷ್ಟು ಪ್ರಶ್ನೆಗಳ ಸುರಿಮಳೆಗೈದರು. ಆಗ ತಬ್ಬಿಬ್ಬಾದ ಶಾಸಕರು ಉತ್ತರಿಸಲು ತಡವರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Published on: Mar 14, 2023 04:09 PM