ಸಿಟಿ ರವಿಯವರನ್ನು ಬೆಳಗಾವಿಯಿಂದ ಬೆಂಗಳೂರಿಗೆ ರಸ್ತೆ ಮೂಲಕ ಕರೆದೊಯ್ಯುತ್ತಿರುವ ಪೊಲೀಸರು

ಅರುಣ್​ ಕುಮಾರ್​ ಬೆಳ್ಳಿ

Updated on: Dec 20, 2024 | 5:05 PM

ಪೊಲೀಸರು ಕಳೆದ ರಾತ್ರಿಯಿಡೀ ಊರಿಂದ ಊರಿಗೆ ಅಲೆದಾಡಿಸಿದ್ದಾರೆ ಮತ್ತು ಜನಪ್ರತಿನಿಧಿಯಾಗಿದ್ದರೂ ಊಟ ಮತ್ತು ನೀರು ಕೊಟ್ಟಿಲ್ಲ ಎಂದು ಕೋರ್ಟ್​ಗೆ ನೀಡಿದ ತಮ್ಮ ಹೇಳಿಕೆಯಲ್ಲಿ ರವಿ ತಿಳಿಸಿದ್ದಾರೆ. ರವಿ ಬಂಧನ ಸಂಬಂಧಿಸಿದಂತೆ ಹಲವಾರು ಪ್ರಶ್ನೆಗಳು ಎದ್ದಿವೆ, ಕಾನೂನನ್ನು ಉಲ್ಲಂಘಿಸಿ ಅವರನ್ನು ಬಂಧಿಸಲಾಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ.

ಬೆಳಗಾವಿ: ನಗರದ ಕೋರ್ಟೊಂದರ ಆದೇಶದ ಮೇರೆಗೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹಾಜರು ಪಡಿಸಲು ಬೆಳಗಾವಿಯಿಂದ ಬೆಂಗಳೂರಿಗೆ ಕರೆದೊಯ್ಯುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಭಾರಿ ಪೊಲೀಸ್ ಭದ್ರತೆಯಲ್ಲಿ ರವಿಯವರನ್ನು ರಸ್ತೆಯ ಮೂಲಕ ರಾಜ್ಯದ ರಾಜಧಾನಿಗೆ ಕರೆದೊಯ್ಯಲಾಗುತ್ತಿದೆ. ನಮ್ಮ ವರದಿಗಾರ ನೀಡುವ ಮಾಹಿತಿ ಪ್ರಕಾರ ಒಬ್ಬ ಡಿಸಿಪಿ, ಮೂವರು ಸಿಪಿಐ ಮತ್ತು ಕೆಲ ಪೊಲೀಸ್ ಇನ್ಸ್​ಪೆಕ್ಟರ್ ಗಳ ಭದ್ರತೆಯಲ್ಲಿ ರವಿಯವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಲಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಲಕ್ಷ್ಮೀ ಹೆಬ್ಬಾಳ್ಕರ್​ಗೆ ನಿಂದನೆ ಆರೋಪ: ಸಿಟಿ ರವಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.