AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಡುಪಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚಳ: ಹಿರಿಯ ನಾಗರಿಕರೇ ಟಾರ್ಗೆಟ್, ಲಕ್ಷಾಂತರ ಹಣ ಲೂಟಿ!

ಉಡುಪಿಯಲ್ಲಿ ಸೈಬರ್ ವಂಚನೆ ಪ್ರಕರಣ ಹೆಚ್ಚಳ: ಹಿರಿಯ ನಾಗರಿಕರೇ ಟಾರ್ಗೆಟ್, ಲಕ್ಷಾಂತರ ಹಣ ಲೂಟಿ!

ಪ್ರಜ್ವಲ್ ಅಮೀನ್​, ಉಡುಪಿ
| Edited By: |

Updated on: Nov 27, 2026 | 7:31 AM

Share

ಉಡುಪಿ ಜಿಲ್ಲೆಯಲ್ಲಿ ಸೈಬರ್ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ವಿಶೇಷವಾಗಿ ಹಿರಿಯ ನಾಗರಿಕರೇ ಸೈಬರ್ ಕದೀಮರ ಮುಖ್ಯ ಗುರಿಯಾಗಿದ್ದಾರೆ. ಲಿಂಕ್‌ಗಳು, ಗಿಫ್ಟ್ ಹ್ಯಾಂಪರ್‌ಗಳ ಮೂಲಕ ಲಕ್ಷಾಂತರ ರೂಪಾಯಿ ದೋಚಲಾಗುತ್ತಿದೆ. ಪೊಲೀಸರು ಅರಿವು ಕಾರ್ಯಕ್ರಮಗಳನ್ನು ನಡೆಸುತ್ತಿದ್ದರೂ, ವಂಚನೆ ಪ್ರಕರಣಗಳು ಇಳಿಕೆಯಾಗಿಲ್ಲ. ಸೈಬರ್ ಖದೀಮರನ್ನು ಮಟ್ಟಹಾಕಲು ವಿಶೇಷ ಯೋಜನೆ ರೂಪಿಸಲಾಗಿದೆ.

ಉಡುಪಿ, ನವೆಂಬರ್​​ 27: ಉಡುಪಿ ಜಿಲ್ಲೆಯು ಶಿಕ್ಷಣದಲ್ಲಿ ಮುಂದುವರಿದ ಜಿಲ್ಲೆಯಾಗಿದ್ದು, ಅತಿ ಹೆಚ್ಚು ಸುಶಿಕ್ಷಿತರನ್ನು ಹೊಂದಿದೆ. ಆದರೂ, ಕಳೆದ ಐದು ವರ್ಷಗಳಿಂದ ಜಿಲ್ಲೆಯಲ್ಲಿ ಸೈಬರ್ ವಂಚನೆ ಪ್ರಕರಣಗಳು ಆತಂಕಕಾರಿಯಾಗಿ ಹೆಚ್ಚಾಗುತ್ತಿವೆ. ವಿಶೇಷವಾಗಿ ಹಿರಿಯ ನಾಗರಿಕರೇ ಸೈಬರ್ ಕದೀಮರ ಸುಲಭ ಗುರಿಯಾಗಿದ್ದಾರೆ. ನಿವೃತ್ತ ಬ್ಯಾಂಕ್ ಅಧಿಕಾರಿಗಳು ಮತ್ತು ಉನ್ನತ ಹುದ್ದೆಗಳಿಂದ ನಿವೃತ್ತರಾದವರನ್ನು ಗುರಿಯಾಗಿಸಿಕೊಂಡು, ಅವರ ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ವಂಚಕರು ದೋಚುತ್ತಿದ್ದಾರೆ.  ವಂಚಕರು ನಕಲಿ ಲಿಂಕ್‌ಗಳನ್ನು ಕಳುಹಿಸುವುದು, ಗಿಫ್ಟ್ ಹ್ಯಾಂಪರ್‌ಗಳ ಆಮಿಷವೊಡ್ಡುವಂತಹ ತಂತ್ರಗಳನ್ನು ಬಳಸುತ್ತಿದ್ದಾರೆ. ಒಂದು ಸೆಕೆಂಡ್‌ನಲ್ಲಿ ಲಿಂಕ್ ತೆರೆಯುವುದರಿಂದಲೇ ಹಣ ಕಳೆದುಕೊಳ್ಳುವ ಘಟನೆಗಳು ನಡೆಯುತ್ತಿವೆ. ಈ ಬಗ್ಗೆ ಪೊಲೀಸ್ ಇಲಾಖೆ ಕಾರ್ಯಾಗಾರಗಳು, ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಿದ್ದರೂ, ಸೈಬರ್ ವಂಚನೆ ಪ್ರಕರಣಗಳು ಕಡಿಮೆಯಾಗಿಲ್ಲ. ಹೀಗಾಗಿ ಹಿರಿಯ ನಾಗರಿಕರ ಮನೆಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಲು ಮತ್ತು ಮೊಬೈಲ್ ಬಳಕೆ ಬಗ್ಗೆ ಎಚ್ಚರಿಕೆ ನೀಡಲು ಉಡುಪಿ ಎಸ್ಪಿ ವಿಶೇಷ ಯೋಜನೆ ರೂಪಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಜ್ವಲ್ ಅಮೀನ್​, ಉಡುಪಿ
ಪ್ರಜ್ವಲ್ ಅಮೀನ್​, ಉಡುಪಿ

ಪ್ರಜ್ವಲ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿರುತ್ತಾರೆ. ಉಡುಪಿ ಜಿಲ್ಲೆಯ ಸ್ಥಳೀಯ ಖಾಸಗಿ ಸುದ್ದಿವಾಹಿನಿಯ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ ಇವರು ಬಳಿಕ ಪ್ರಜಾವಾಣಿಯ ವರದಿಗಾರನಾಗಿ ಕೆಲಸ ಮಾಡಿರುತ್ತಾರೆ. ನಂತರ 6 ವರ್ಷ ಟಿ.ವಿ 5ನ ದಕ್ಷಿಣ ಕನ್ನಡ ಜಿಲ್ಲಾ ವರದಿಗಾರನಾಗಿ ನಂತರ ದಿಗ್ವಿಜಯ ನ್ಯೂಸ್ ನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವರದಿಗಾರನಾಗಿ ಕಾರ್ಯನಿರ್ವಾಹಸಿದ್ದಾರೆ. ಕಳೆದ ಹನ್ನೊಂದು ತಿಂಗಳಿನಿಂದ ಟಿ.ವಿ 9 ಸಂಸ್ಥೆಯಲ್ಲಿ ಉಡುಪಿ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಾಹಿಸುತ್ತಿದ್ದಾರೆ.

Read More