ಅಕ್ವಾನ್ ಚಂಡಮಾರುತ: ಒಡಿಶಾ, ಆಂಧ್ರದಲ್ಲಿ 3 ಲಕ್ಷ ಜನರ ಸ್ಥಳಾಂತರ, 69 ರೈಲುಗಳ ಸಂಚಾರ ರದ್ದು
ಬಂಗಾಳಕೊಲ್ಲಿಯಲ್ಲಿ ಅಕ್ವಾನ್ ಚಂಡಮಾರುತದ ಅಬ್ಬರ ತೀವ್ರಗೊಂಡಿದ್ದು, ಇಂದು ಒಡಿಶಾ ಮತ್ತು ಆಂಧ್ರಪ್ರದೇಶಕ್ಕೆ ಅಪ್ಪಳಿಸಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ 3 ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗಿದೆ. 69 ರೈಲುಗಳ ಸಂಚಾರ ರದ್ದುಪಡಿಸಲಾಗಿದ್ದು, ವಿಮಾನ ಸಂಚಾರದಲ್ಲೂ ವ್ಯತ್ಯಯ ಉಂಟಾಗುವ ಭೀತಿ ಇದೆ. ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ.ಚಂಡಮಾರುತದಿಂದಾಗಿ ಸಾರಿಗೆ ವ್ಯವಸ್ಥೆಯ ಮೇಲೂ ತೀವ್ರ ಪರಿಣಾಮ ಬೀರಿದೆ. ಮುನ್ನೆಚ್ಚರಿಕಾ ಕ್ರಮವಾಗಿ 69 ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ಇದರಿಂದ ಸಾವಿರಾರು ಪ್ರಯಾಣಿಕರಿಗೆ ತೊಂದರೆಯಾಗಿದೆ.
ಒಡಿಶಾ, ನವೆಂಬರ್ 20: ಬಂಗಾಳಕೊಲ್ಲಿಯಲ್ಲಿ ಅಕ್ವಾನ್ ಚಂಡಮಾರುತದ ಅಬ್ಬರ ತೀವ್ರಗೊಂಡಿದ್ದು, ಇಂದು(ನ.20) ಒಡಿಶಾ ಮತ್ತು ಆಂಧ್ರಪ್ರದೇಶ ರಾಜ್ಯಗಳಿಗೆ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದ್ದು, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಚಂಡಮಾರುತದ ಭೀತಿಯಿಂದಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ತೀರದ ತಗ್ಗು ಪ್ರದೇಶಗಳಿಂದ 3 ಲಕ್ಷಕ್ಕೂ ಹೆಚ್ಚು ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ನಾಗರಿಕರ ಸುರಕ್ಷತೆಗಾಗಿ ಜಿಲ್ಲಾಡಳಿತಗಳು ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ.
ಚಂಡಮಾರುತದಿಂದಾಗಿ ಸಾರಿಗೆ ವ್ಯವಸ್ಥೆಯ ಮೇಲೂ ತೀವ್ರ ಪರಿಣಾಮ ಬೀರಿದೆ. ಮುನ್ನೆಚ್ಚರಿಕಾ ಕ್ರಮವಾಗಿ 69 ರೈಲುಗಳ ಸಂಚಾರವನ್ನು ರದ್ದುಪಡಿಸಲಾಗಿದೆ. ಇದರಿಂದ ಸಾವಿರಾರು ಪ್ರಯಾಣಿಕರಿಗೆ ತೊಂದರೆಯಾಗಿದೆ. ಅಲ್ಲದೆ, ಆಂಧ್ರಪ್ರದೇಶದಲ್ಲಿ ವಿಮಾನ ಸಂಚಾರಕ್ಕೂ ಅಕ್ವಾನ್ ಚಂಡಮಾರುತದ ಭೀತಿ ಎದುರಾಗಿದ್ದು, ವಿಮಾನಗಳ ಓಡಾಟದಲ್ಲೂ ವ್ಯತ್ಯಯ ಉಂಟಾಗುವ ಸಾಧ್ಯತೆ ದಟ್ಟವಾಗಿದೆ.
ಬಂಗಾಳಕೊಲ್ಲಿಯಲ್ಲಿ ಈಗಾಗಲೇ ಅಕ್ವಾನ್ ಚಂಡಮಾರುತದ ಆರ್ಭಟ ಆರಂಭವಾಗಿದ್ದು, ಇದರ ತೀವ್ರತೆ ಹೆಚ್ಚುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಒಡಿಶಾ ಮತ್ತು ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳ ಜನರು ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿರುವಂತೆ ಸೂಚಿಸಲಾಗಿದೆ. ಸರ್ಕಾರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
