ಅರ್ನಬ್ ಚಂಡಮಾರುತದ ಅಬ್ಬರ; ಭೋರ್ಗರೆಯುತ್ತಿದೆ ಒಡಿಶಾದ ಗಂಡಹಾತಿ ಜಲಪಾತ

Updated on: Oct 29, 2026 | 11:13 PM

ಅರ್ನಬ್ ಚಂಡಮಾರುತದ ಹಿನ್ನೆಲೆಯಲ್ಲಿ ಸುರಿಯುತ್ತಿರುವ ಭೀಕರ ಮಳೆಯಿಂದಾಗಿ ಒಡಿಶಾದ ಗಜಪತಿ ಜಿಲ್ಲೆಯ ಪ್ರಸಿದ್ಧ 'ಗಂಡಹಾತಿ ಜಲಪಾತ' ಅಪಾಯಕಾರಿ ಮಟ್ಟದಲ್ಲಿ ಉಕ್ಕಿ ಹರಿಯುತ್ತಿದ್ದು, ನದಿ-ಕಾಲುವೆಗಳು ಮೈದುಂಬಿ ಹರಿಯುತ್ತಿವೆ. ಮಳೆನೀರು ಭಾರಿ ಪ್ರಮಾಣದಲ್ಲಿ ಹರಿದುಬರುತ್ತಿರುವುದರಿಂದ ಗಂಡಹಾತಿ ಜಲಪಾತವು ಅಪಾಯದ ಮಟ್ಟ ಮೀರಿ ಭೋರ್ಗರೆಯುತ್ತಿದ್ದು, ಜಲಪಾತದ ಸುತ್ತಮುತ್ತಲಿನ ಪ್ರವಾಸಿ ತಾಣ ಹಾಗೂ ಕೆಳಭಾಗದ ಹಳ್ಳಿಗಳಿಗೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಭುವನೇಶ್ವರ, ಅಕ್ಟೋಬರ್ 29: ಅರ್ನಬ್ ಚಂಡಮಾರುತದ ಹಿನ್ನೆಲೆಯಲ್ಲಿ ಸುರಿಯುತ್ತಿರುವ ಭೀಕರ ಮಳೆಯಿಂದಾಗಿ ಒಡಿಶಾದ ಗಜಪತಿ ಜಿಲ್ಲೆಯ ಪ್ರಸಿದ್ಧ ‘ಗಂಡಹಾತಿ ಜಲಪಾತ’ ಅಪಾಯಕಾರಿ ಮಟ್ಟದಲ್ಲಿ ಉಕ್ಕಿ ಹರಿಯುತ್ತಿದ್ದು, ನದಿ-ಕಾಲುವೆಗಳು ಮೈದುಂಬಿ ಹರಿಯುತ್ತಿವೆ. ಮಳೆನೀರು ಭಾರಿ ಪ್ರಮಾಣದಲ್ಲಿ ಹರಿದುಬರುತ್ತಿರುವುದರಿಂದ ಗಂಡಹಾತಿ ಜಲಪಾತವು ಅಪಾಯದ ಮಟ್ಟ ಮೀರಿ ಭೋರ್ಗರೆಯುತ್ತಿದ್ದು, ಜಲಪಾತದ ಸುತ್ತಮುತ್ತಲಿನ ಪ್ರವಾಸಿ ತಾಣ ಹಾಗೂ ಕೆಳಭಾಗದ ಹಳ್ಳಿಗಳಿಗೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಗಂಜಾಂ ಮತ್ತು ಗಜಪತಿ ಜಿಲ್ಲೆಗಳ ತಗ್ಗು ಪ್ರದೇಶಗಳು, ಕೃಷಿ ಭೂಮಿಗಳು ಜಲಾವೃತಗೊಂಡಿವೆ. ಹಲವು ಮುಖ್ಯ ರಸ್ತೆಗಳ ಮೇಲೆ ನೀರು ಹರಿಯುತ್ತಿರುವುದರಿಂದ ಸಂಚಾರ ಸಂಪೂರ್ಣವಾಗಿ ಕಡಿತಗೊಂಡಿದೆ. ಅಪಾಯದಲ್ಲಿರುವ ಕರಾವಳಿ ಹಾಗೂ ತಗ್ಗು ಪ್ರದೇಶಗಳಿಂದ ಈಗಾಗಲೇ 20,000ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಗಂಜಿ ಕೇಂದ್ರಗಳು ಹಾಗೂ ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More