Video: ಫೆಂಗಲ್ ಚಂಡಮಾರುತ, ತಿರುವಣ್ಣಾಮಲೈನಲ್ಲಿ ಭೂಕುಸಿತ, 7 ಮಂದಿ ಸಿಲುಕಿರುವ ಶಂಕೆ
ಫೆಂಗಲ್ ಚಂಡಮಾರುತವು ತಮಿಳುನಾಡಿನಾದ್ಯಂತ ಅನಾಹುತಗಳನ್ನು ಸೃಷ್ಟಿಮಾಡುತ್ತಿದೆ. ತಿರುವಣ್ಣಾಮಲೈನಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಭೂಕುಸಿತ ಸಂಭವಿಸಿದೆ. ಐದು ಮಕ್ಕಳು ಸೇರಿ 7 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ
ಫೆಂಗಲ್ ಚಂಡಮಾರುತವು ತಮಿಳುನಾಡಿನಾದ್ಯಂತ ಅನಾಹುತಗಳನ್ನು ಸೃಷ್ಟಿಮಾಡುತ್ತಿದೆ. ತಿರುವಣ್ಣಾಮಲೈನಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಭೂಕುಸಿತ ಸಂಭವಿಸಿದೆ. ಐದು ಮಕ್ಕಳು ಸೇರಿ 7 ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಫೆಂಗಲ್ ಚಂಡಮಾರುತದ ಪ್ರಭಾವದಿಂದ ಭಾನುವಾರ ದಿನವಿಡೀ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ. ತಿರುವಣ್ಣಾಮಲೈನ ಅಣ್ಣಾಮಲೈಯಾರ್ ಬೆಟ್ಟದ ತಪ್ಪಲಿನಲ್ಲಿರುವ ವಿಒಸಿ ನಗರದಲ್ಲಿ ಭೂಕುಸಿತ ಸಂಭವಿಸಿದ್ದು, ಹಲವಾರು ಮನೆಗಳಿಗೆ ಹಾನಿಯಾಗಿದೆ. ರಕ್ಷಣಾ ಕಾರ್ಯ ಮುಂದುವರೆದಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Dec 02, 2024 09:41 AM
Latest Videos