Cyclone Fengal: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ; ಕೊಚ್ಚಿಹೋದ ಬಸ್​ಗಳು

Cyclone Fengal: ತಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ; ಕೊಚ್ಚಿಹೋದ ಬಸ್​ಗಳು

ಸುಷ್ಮಾ ಚಕ್ರೆ
|

Updated on:Dec 02, 2024 | 3:35 PM

ತಮಿಳುನಾಡಿನಲ್ಲಿ ನಿಲ್ಲದ ಫೆಂಗಲ್ ಚಂಡಮಾರುತದ ಪರಿಣಾಮವಾಗಿ ಕೃಷ್ಣಗಿರಿ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. ಉತ್ತಂಗರೈನಲ್ಲಿ ಕಳೆದ 24 ಗಂಟೆಗಳಲ್ಲಿ 503 ಮಿಲಿ ಮೀಟರ್ ದಾಖಲೆಯ ಮಳೆಯಾಗಿದೆ. ಕೆರೆ ಉಕ್ಕಿ ಹರಿದ ಪರಿಣಾಮ ಕೊಚ್ಚಿ ಹೋದ ವಾಣಿಯಂಬಾಡಿ ರಸ್ತೆಯಲ್ಲಿ ವಾಹನಗಳನ್ನು ನಿಲ್ಲಿಸಲಾಗಿತ್ತು.

ಚೆನ್ನೈ: ಫೆಂಗಲ್ ಚಂಡಮಾರುತವು ತಮಿಳುನಾಡಿನಲ್ಲಿ ಭಾರೀ ಮಳೆಯನ್ನು ಉಂಟುಮಾಡಿದೆ. ಕೃಷ್ಣಗಿರಿ ಮತ್ತು ಧರ್ಮಪುರಿ ಜಿಲ್ಲೆಗಳಲ್ಲಿ ದಾಖಲೆ ಪ್ರಮಾಣದ ಮಳೆಯಾಗಿದೆ. ಬೆಳಿಗ್ಗೆ 10 ಗಂಟೆಗೆ ಕೃಷ್ಣಗಿರಿಯ ಉತ್ತಂಗರೈನಲ್ಲಿ 503 ಮಿ.ಮೀ ಮಳೆಯಾಗಿದೆ. ಧರ್ಮಪುರಿಯ ಹರೂರಿನಲ್ಲಿ 331 ಮಿ.ಮೀ ಮಳೆ ದಾಖಲಾಗಿದೆ. ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಧರ್ಮಪುರಿ ಮತ್ತು ಕೃಷ್ಣಗಿರಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕರೆ ನಡೆಸಿದ್ದು, ಪರಿಹಾರ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಸೂಚಿಸಿದ್ದಾರೆ. ಫೆಂಗಲ್ ಚಂಡಮಾರುತದಿಂದಾಗಿ ಭಾನುವಾರ ಕೃಷ್ಣಗಿರಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು, ಉತ್ತಂಗರೈ ತಾಲೂಕಿನಲ್ಲಿ 503 ಮಿ.ಮೀ ಅತಿ ಹೆಚ್ಚು ಮಳೆ ದಾಖಲಾಗಿದೆ. ಸಾಲಾಗಿ ನಿಲ್ಲಿಸಲಾಗಿದ್ದ ಬಸ್​ಗಳು ಮಳೆ ನೀರಿನಲ್ಲಿ ಕೊಚ್ಚಿ ಹೋಗಿರುವ ವಿಡಿಯೋ ವೈರಲ್ ಆಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Dec 02, 2024 03:31 PM