Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಬೆಂಗಳೂರಿನ ಪುಲಿಕೇಶಿನಗರ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಬೆಳಗ್ಗೆ ಸಿಲಿಂಡರ್ ಸ್ಫೋಟ ಸಂಭವಿಸಿ ಭಾರಿ ಅನಾಹುತವಾಗಿದೆ. ಅದೃಷ್ಟವಶಾತ್ ಇಬ್ಬರು ಪ್ರಾಣಪಾಯದಿಂದ ಪಾರಾಗಿದ್ದು, ಸುಟ್ಟ ಗಾಯಗಳಾಗಿವೆ. ಇಬ್ಬರನ್ನೂ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ರಸ್ತೆಯಲ್ಲಿ ನಡೆದುಹೋಗುತ್ತಿದ್ದ ವ್ಯಕ್ತಿ ಸ್ವಲ್ಪದರಲ್ಲೇ ಬಚಾವ್ ಆಗಿದ್ದು, ಸಿಸಿಟಿವಿ ವಿಡಿಯೋ ಇಲ್ಲಿದೆ.
ಬೆಂಗಳೂರು, ಮಾರ್ಚ್ 26: ಬೆಂಗಳೂರಿನ ಪುಲಿಕೇಶಿನಗರ ಬಳಿಯ ಕಾಕ್ಸ್‌ಟೌನ್ ಬಳಿ ಭಯಾನಕ ಸಿಲಿಂಡರ್ ಸ್ಫೋಟ ಸಂಭವಿಸಿದೆ. ಸ್ಫೋಟದ ರಭಸಕ್ಕೆ ವಸ್ತುಗಳೆಲ್ಲ ಹಾರಿಹೋಗಿದ್ದು, ರಸ್ತೆ ಬದಿ ನಡೆದು ಹೋಗುತ್ತಿದ್ದ ವ್ಯಕ್ತಿ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಸ್ಫೋಟದ ತೀವ್ರತೆಗೆ ಕಿವಿ ಮುಚ್ಚಿಕೊಂಡು ಕೂದಲೆಳೆ ಅಂತರದಿಂದ ಬಚಾವಾಗಿದ್ದಾರೆ. ಘಟನೆಯ ಸಿಸಿಟಿವಿ ವಿಡಿಯೋ ಇಲ್ಲಿದೆ.
ಸಿಲಿಂಡರ್ ಸ್ಫೋಟ ಸಂಭವಿಸುತ್ತಿದ್ದಂತೆಯೇ ಇಡೀ ಮನೆ ಹೊತ್ತಿ ಉರಿದಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ. ಕೊನೆಗೂ ಬೆಂಕಿ ನಂದಿಸಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ. ಬೆಳಗ್ಗೆ ನಾಲ್ಕು ಗಂಟೆಗೆ ಸ್ಪೋಟದ ಸದ್ದು ಕೇಳಿಸಿದ್ದು. ಹೊರ ಬಂದು ನೋಡಿದಾಗ ಬೆಂಕಿ ಉರಿಯುತ್ತಿತ್ತು ಎಂದು ಸ್ಥಳೀಯ ನಿವಾಸಿ ಹೇಳಿದ್ದಾರೆ.
Latest Videos