AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಕ್ಕೂರು-ಯಲಹಂಕ ಜನರ ಕನಸು ನನಸು: ಜಕ್ಕೂರು ಫ್ಲೈಓವರ್ ಉದ್ಘಾಟಿಸಿದ ಸಿಎಂ ಡಿಕೆ ಶಿವಕುಮಾರ್

ಜಕ್ಕೂರು-ಯಲಹಂಕ ಜನರ ಕನಸು ನನಸು: ಜಕ್ಕೂರು ಫ್ಲೈಓವರ್ ಉದ್ಘಾಟಿಸಿದ ಸಿಎಂ ಡಿಕೆ ಶಿವಕುಮಾರ್

ಅನಿಲ್​ ಕಲ್ಕೆರೆ
| Edited By: |

Updated on: Nov 18, 2026 | 4:38 PM

Share

ಸಿಎಂ ಡಿಕೆ ಶಿವಕುಮಾರ್ ಜಕ್ಕೂರು-ಯಲಹಂಕ ನಡುವಿನ ಬಹುನಿರೀಕ್ಷಿತ ರೈಲ್ವೆ ಮೇಲ್ಸೇತುವೆಯನ್ನು ಉದ್ಘಾಟಿಸಿದ್ದಾರೆ. 15 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಈ ಯೋಜನೆಯು ಜಕ್ಕೂರು ಮತ್ತು ಯಲಹಂಕ ಪ್ರದೇಶದ ಜನರ ಬಹುದಿನಗಳ ಕನಸನ್ನು ನನಸು ಆಗಿದೆ. ಈ ಮೇಲ್ಸೇತುವೆ ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿದೆ.

ಬೆಂಗಳೂರು, ನವೆಂಬರ್​​ 18: ನಗರದ ಸಂಚಾರ ವ್ಯವಸ್ಥೆಯನ್ನು ಸುಧಾರಿಸಿ, ಜನರ ದೈನಂದಿನ ಪ್ರಯಾಣವನ್ನು ಮತ್ತಷ್ಟು ಸುಗಮಗೊಳಿಸುವ ನಿಟ್ಟಿನಲ್ಲಿ ಬುಧವಾರ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಜಕ್ಕೂರು ರೈಲ್ವೆ ಮೇಲ್ಸೇತುವೆಯನ್ನು ಸಿಎಂ ಡಿಕೆ ಶಿವಕುಮಾರ್​ ಲೋಕಾರ್ಪಣೆಗೊಳಿಸಿದ್ದಾರೆ. ಆ ಮೂಲಕ ಸುಮಾರು 15 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆಯೂ ಕೊನೆಗೂ ಪೂರ್ಣಗೊಂಡಿದೆ. 26.16 ಕೋಟಿ ರೂ ವೆಚ್ಚದಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ನಿರ್ಮಿಸಿರುವ 443 ಮೀಟರ್ ಉದ್ದದ ನಾಲ್ಕು ಪಥಗಳ ಈ ಮೇಲ್ಸೇತುವೆಯು ಜಕ್ಕೂರು–ಯಲಹಂಕ ನಡುವೆ ನೇರ ಸಂಪರ್ಕ ಕಲ್ಪಿಸಲಿದೆ. ಇದರಿಂದ ಉತ್ತರ ಬೆಂಗಳೂರಿನ ಸಂಪರ್ಕ ಸುಲಭವಾಗಲಿದ್ದು, ಪ್ರಯಾಣದ ದೂರ ಮತ್ತು ಸಮಯ ಉಳಿತಾಯವಾಗಲಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More