ಮಲ್ಲಿಕಾರ್ಜುನ ಖರ್ಗೆ ಭೇಟಿ ಬಳಿಕ ಅಚ್ಚರಿಯ ಹೇಳಿಕೆ ಕೊಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್​​

Edited By:

Updated on: Apr 26, 2026 | 6:21 AM

ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್, ಇದು ಸಾಮಾನ್ಯ ಭೇಟಿ ಎಂದು ಸ್ಪಷ್ಟಪಡಿಸಿದ್ದಾರೆ. ವಿವಿಧ ರಾಜ್ಯಗಳ ಚುನಾವಣಾ ವರದಿ ಸಲ್ಲಿಸುವುದು ತಮ್ಮ ಕರ್ತವ್ಯ ಎಂದಿದ್ದಾರೆ. ಮತ್ತೊಂದೆಡೆ ಶಾಸಕ ಹೆಚ್.ಡಿ. ರಂಗನಾಥ್ ಡಿ.ಕೆ. ಶಿವಕುಮಾರ್‌ಗೆ ಮುಖ್ಯಮಂತ್ರಿ ಸ್ಥಾನದ ಒಡಂಬಡಿಕೆ ಪೂರ್ಣಗೊಳ್ಳುವ ಕುರಿತು ಮಾತನಾಡಿದ್ದು, ಹೈಕಮಾಂಡ್‌ನಿಂದ ದೊಡ್ಡ ಉಡುಗೊರೆ ನಿರೀಕ್ಷೆಯಿದೆ ಎಂದಿದ್ದಾರೆ.

ದೆಹಲಿ, ಏಪ್ರಿಲ್​​ 26: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಭೇಟಿಯ ಕುರಿತು ಪ್ರತಿಕ್ರಿಯಿಸಿದ ಡಿಕೆಶಿ, ಖರ್ಗೆಯವರು ಎಐಸಿಸಿ ಅಧ್ಯಕ್ಷರು, ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ. ನಾವು ಭೇಟಿ ಮಾಡುವುದು ಸಹಜ ಎಂದು ಸ್ಪಷ್ಟಪಡಿಸಿದ್ದಾರೆ. ಬೇರೆ ಬೇರೆ ರಾಜ್ಯಗಳ ಚುನಾವಣೆಗೆ ತಮ್ಮನ್ನು ವೀಕ್ಷಕರಾಗಿ ಕಳಿಸಲಾಗಿತ್ತು. ಅಸ್ಸಾಂ, ತಮಿಳುನಾಡು, ಕೇರಳದಲ್ಲಿ ನಡೆದ ಚುನಾವಣಾ ಪ್ರಚಾರಗಳು ಮತ್ತು ಅಲ್ಲಿನ ಪರಿಸ್ಥಿತಿಗಳ ಕುರಿತು ಪಕ್ಷದ ಹಿರಿಯರಿಗೆ ವರದಿ ಸಲ್ಲಿಸುವುದು ನನ್ನ ಕರ್ತವ್ಯ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More