ಸಿಎಲ್ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್: ಕಾರಣ ಇಲ್ಲಿದೆ
ಡಿಕೆ ಶಿವಕುಮಾರ್ ಅವರು ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ನೂತನ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮದ ದಿನಾಂಕಗಳು ಮತ್ತು ಇತರ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಲಾಗಿದ್ದು, ರಾಜ್ಯಪಾಲರು ಮಧ್ಯಾಹ್ನ ಧರ್ಮಸ್ಥಳಕ್ಕೆ ತೆರಳಲಿರುವ ಕಾರಣ ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಡಿಕೆ ಶಿವಕುಮಾರ್ ಅವರು ಗವರ್ನರ್ ಭೇಟಿಯಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರು, ಮೇ 30: ಸಿಎಲ್ಪಿ ಸಭೆ ಮುನ್ನವೇ ಲೋಕಭವನದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರನ್ನು ಡಿಕೆ ಸಹೋದರರು ಭೇಟಿಯಾಗಿದ್ದಾರೆ. ಗವರ್ನರ್ ಜೊತೆ ಡಿ.ಕೆ.ಶಿವಕುಮಾರ್ ಅನೌಪಚಾರಿಕ ಮಾತುಕತೆ ನಡೆಸಿದ್ದು, ಪ್ರಮಾಣವಚನದ ದಿನಾಂಕಗಳ ಬಗ್ಗೆ ಹಾಗೂ ರಾಜ್ಯಪಾಲರ ಲಭ್ಯತೆ ಬಗ್ಗೆ ಚರ್ಚೆ ನಡೆಸಿದ್ದಾರೆ. ತಾತ್ಕಾಲಿಕ ವೇಳಾಪಟ್ಟಿ ಬಗ್ಗೆ ರಾಜ್ಯಪಾಲರ ಬಳಿ ಡಿಕೆಶಿ ಪ್ರಸ್ತಾಪ ಮಾಡಿದ್ದು, ಎರಡು, ಮೂರು ದಿನಾಂಕಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮಧ್ಯಾಹ್ನದ ಬಳಿಕ ಧರ್ಮಸ್ಥಳಕ್ಕೆ ರಾಜ್ಯಪಾಲರು ತೆರಳುತ್ತಿದ್ದು, ಇಂದು ಲೋಕಭವನದಿಂದ ರಾಜ್ಯಪಾಲರು ಹೊರಟರೆ ನಾಳೆ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಹೀಗಾಗಿ ಸಿಎಲ್ಪಿ ಸಭೆಗೂ ಮೊದಲೇ ರಾಜ್ಯಪಾಲರನ್ನು ಡಿಕೆಶಿ ಭೇಟಿಯಾಗಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಅಸಹ್ಯದಲ್ಲೇ ಅಸಹ್ಯ, ಅದಕ್ಕೆ ನಾಮಿನೇಟ್ ಮಾಡಿದೆ; ಕಿರಣ್ ನಾಮಿನೇಟ್
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು

