ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

Edited By:

Updated on: May 30, 2026 | 12:46 PM

ಡಿಕೆ ಶಿವಕುಮಾರ್ ಅವರು ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ನೂತನ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮದ ದಿನಾಂಕಗಳು ಮತ್ತು ಇತರ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಲಾಗಿದ್ದು, ರಾಜ್ಯಪಾಲರು ಮಧ್ಯಾಹ್ನ ಧರ್ಮಸ್ಥಳಕ್ಕೆ ತೆರಳಲಿರುವ ಕಾರಣ ಶಾಸಕಾಂಗ ಪಕ್ಷದ ಸಭೆಗೂ ಮುನ್ನವೇ ಡಿಕೆ ಶಿವಕುಮಾರ್ ಅವರು ಗವರ್ನರ್​​ ಭೇಟಿಯಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಬೆಂಗಳೂರು, ಮೇ 30: ಸಿಎಲ್​​ಪಿ ಸಭೆ ಮುನ್ನವೇ ಲೋಕಭವನದಲ್ಲಿ ರಾಜ್ಯಪಾಲ ಗೆಹ್ಲೋಟ್‌ ಅವರನ್ನು ಡಿಕೆ ಸಹೋದರರು ಭೇಟಿಯಾಗಿದ್ದಾರೆ. ಗವರ್ನರ್​​ ಜೊತೆ ಡಿ.ಕೆ.ಶಿವಕುಮಾರ್ ಅನೌಪಚಾರಿಕ ಮಾತುಕತೆ ನಡೆಸಿದ್ದು, ಪ್ರಮಾಣವಚನದ ದಿನಾಂಕಗಳ ಬಗ್ಗೆ ಹಾಗೂ ರಾಜ್ಯಪಾಲರ ಲಭ್ಯತೆ ಬಗ್ಗೆ ಚರ್ಚೆ ನಡೆಸಿದ್ದಾರೆ. ತಾತ್ಕಾಲಿಕ ವೇಳಾಪಟ್ಟಿ ಬಗ್ಗೆ ರಾಜ್ಯಪಾಲರ ಬಳಿ ಡಿಕೆಶಿ ಪ್ರಸ್ತಾಪ ಮಾಡಿದ್ದು, ಎರಡು, ಮೂರು ದಿನಾಂಕಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮಧ್ಯಾಹ್ನದ ಬಳಿಕ ಧರ್ಮಸ್ಥಳಕ್ಕೆ ರಾಜ್ಯಪಾಲರು ತೆರಳುತ್ತಿದ್ದು, ಇಂದು ಲೋಕಭವನದಿಂದ ರಾಜ್ಯಪಾಲರು ಹೊರಟರೆ ನಾಳೆ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಹೀಗಾಗಿ ಸಿಎಲ್​​ಪಿ ಸಭೆಗೂ ಮೊದಲೇ ರಾಜ್ಯಪಾಲರನ್ನು ಡಿಕೆಶಿ ಭೇಟಿಯಾಗಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More