ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಸಿಎಂ ಡಿ.ಕೆ. ಶಿವಕುಮಾರ್​

Edited By:

Updated on: Apr 03, 2026 | 12:00 PM

ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬದ ಸಮಾಜ ಸೇವೆ, ಶಿಕ್ಷಣ ಸಂಸ್ಥೆಗಳು ಹಾಗೂ ಆಸ್ಪತ್ರೆಗಳ ಕೊಡುಗೆಗಳನ್ನು ಶ್ಲಾಘಿಸಿದ್ದಾರೆ. ಬೆಂಗಳೂರಿಗಿಂತಲೂ ಉತ್ತಮವಾಗಿ ನಗರದ ಅಭಿವೃದ್ಧಿ ಆಗಿರುವುದನ್ನು ಮೆಚ್ಚಿದ ಅವರು, ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿವೆ ಎಂದು ತಿಳಿಸಿದ್ದಾರೆ.

ದಾವಣಗೆರೆ, ಏಪ್ರಿಲ್​​ 03: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಾವಣಗೆರೆಯಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭ ಶಾಮನೂರು ಶಿವಶಂಕರಪ್ಪ ಕುಟುಂಬದ ಕೊಡುಗೆಗಳನ್ನು ಮನಸಾರೆ ಹೊಗಳಿದ್ದಾರೆ. ಆಸ್ಪತ್ರೆಗಳು, ಚೌಲ್ಟ್ರಿಗಳು ಮತ್ತು ಶಿಕ್ಷಣ ಸಂಸ್ಥೆಗಳ ಮೂಲಕ ಸಮಾಜಕ್ಕೆ ಈ ಕುಟುಂಬವು ದೊಡ್ಡ ನೆರವು ನೀಡಿದೆ. ನಗರದ ಅಭಿವೃದ್ಧಿ ಕಾರ್ಯಗಳು, ರಸ್ತೆಗಳು, ಪಾರ್ಕ್‌ಗಳ ನಿರ್ವಹಣೆ ಮತ್ತು ಬಸ್ ನಿಲ್ದಾಣಗಳು ಬೆಂಗಳೂರಿಗಿಂತಲೂ ಉತ್ತಮವಾಗಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Apr 03, 2026 11:59 AM
Loading...
Unable to load recommendations.
Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More