ನಾಡದೇವತೆಗೆ ಡಿಕೆಶಿ ಅಭಿಮಾನಿಗಳಿಂದ ವಿಶೇಷ ಪೂಜೆ, ರಥೋತ್ಸವ
ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಯ ಚರ್ಚೆ ತೀವ್ರಗೊಂಡಿರುವ ನಡುವೆ, ಡಿ.ಕೆ. ಶಿವಕುಮಾರ್ ಅಭಿಮಾನಿಗಳು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬೆಳ್ಳಿ ಪಲ್ಲಕ್ಕಿಯಲ್ಲಿ ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಯ ಪ್ರದಕ್ಷಿಣೆ ನಡೆಸಿ, ತಮ್ಮ ನೆಚ್ಚಿನ ನಾಯಕ ಡಿಕೆಶಿ ಅವರು ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿದ್ದಾ
ಮೈಸೂರು, ನವೆಂಬರ್ 28: ಕರ್ನಾಟಕ ರಾಜಕಾರಣದಲ್ಲಿ ಸಿಎಂ ಕುರ್ಚಿಯ ಪೈಪೋಟಿ ತಾರಕಕ್ಕೇರಿರುವ ನಡುವೆ ಡಿ.ಕೆ. ಶಿವಕುಮಾರ್ ಅವರ ಅಭಿಮಾನಿಗಳು ನಾಡದೇವತೆ ತಾಯಿ ಚಾಮುಂಡೇಶ್ವರಿಯ ಮೊರೆ ಹೋಗಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆಗಳನ್ನು ಸಲ್ಲಿಸಲಾಗಿದ್ದು, ಬೆಳ್ಳಿ ಪಲ್ಲಕ್ಕಿಯಲ್ಲಿ ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಯ ಪ್ರದಕ್ಷಿಣೆ ನಡೆಸಿ, ತಮ್ಮ ನೆಚ್ಚಿನ ನಾಯಕ ಮುಖ್ಯಮಂತ್ರಿಯಾಗಲೆಂದು ಪ್ರಾರ್ಥಿಸಿದ್ದಾರೆ. ಬೆಳ್ಳಿ ರಥದ ಮುಂಭಾಗದಲ್ಲಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವನ್ನು ಹಿಡಿದು ಅಭಿಮಾನಿಗಳು ಘೋಷಣೆ ಕೂಡ ಕೂಗಿದ್ದಾರೆ. ಈ ಹಿಂದೆ ಡಿ.ಕೆ. ಶಿವಕುಮಾರ್ ಕೂಡ ಚಾಮುಂಡೇಶ್ವರಿ ಸನ್ನಿಧಾನದ ಗರ್ಭಗುಡಿಯಲ್ಲಿ ಧ್ಯಾನ ಮಾಡಿದ್ದರು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 28, 2025 11:59 AM
Latest Videos
