ಮೊದಲ ಭಾರಿಗೆ ಸ್ವಕ್ಷೇತ್ರಕ್ಕೆ ಭೇಟಿ ನೀಡುತ್ತಿರುವ ಡಿಕೆ ಶಿವಕುಮಾರ್​: ಮೆಟ್ರೋದಲ್ಲಿ ಸಂಚರಿಸಲು ಸಿಎಂ ನಿರ್ಧಾರ

Edited By:

Updated on: Jun 07, 2026 | 9:20 AM

ಸಿಎಂ ಡಿಕೆ ಶಿವಕುಮಾರ್​​ ಇಂದು ಕನಕಪುರ ಮತ್ತು ಹಾರೋಹಳ್ಳಿಯಲ್ಲಿ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸಿ.ಎಂ. ಆದ ಬಳಿಕ ಸ್ವಕ್ಷೇತ್ರಕ್ಕೆ ಇದು ಅವರು ಮೊದಲ ಭಾರಿಗೆ ಭೇಟಿ ನೀಡುತ್ತಿದ್ದಾರೆ. ಇನ್ನು ಜೀರೋ ಟ್ರಾಫಿಕ್​ನಿಂದ ವಾಹನ ಸವಾರರಿಗೆ ತೊಂದರೆ ಹಿನ್ನೆಲೆ ಮೆಟ್ರೋದಲ್ಲಿ ಸಂಚರಿಸಲಿದ್ದಾರೆ.

ಬೆಂಗಳೂರು, ಜೂನ್​​ 07: ಸಿಎಂ ಡಿ.ಕೆ. ಶಿವಕುಮಾರ್​ ಇಂದು ಬೆಂಗಳೂರು ದಕ್ಷಿಣ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸಿಎಂ ಆದ ಬಳಿಕ ಸ್ವಕ್ಷೇತ್ರ ಕನಕಪುರಕ್ಕೆ ಮೊದಲ ಭಾರಿಗೆ ಭೇಟಿ ನೀಡುತ್ತಿರುವ ಡಿಕೆ ಶಿವಕುಮಾರ್​ ಹಾರೋಹಳ್ಳಿ ಮತ್ತು ಕನಕಪುರ ತಾಲೂಕಿನಲ್ಲಿ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗಿಯಾದಲಿದ್ದಾರೆ. ವಿಧಾನಸೌಧದ ಮೆಟ್ರೋ ಸ್ಟೇಷನ್‌ನಿಂದ ಕನಕಪುರ ರಸ್ತೆವರೆಗೂ ಮೆಟ್ರೋದಲ್ಲಿ ಸಿಎಂ ಪ್ರಯಾಣಿಸಲಿದ್ದಾರೆ. ಜೀರೋ ಟ್ರಾಫಿಕ್​ನಿಂದ ವಾಹನ ಸವಾರರಿಗೆ ಆಗುವ ತೊಂದರೆಯನ್ನು ತಪ್ಪಿಸಲು ಈ ನಿರ್ಧಾರ ಕೈಗೊಂಡಿದ್ದಾರೆ. ಕನಕಪುರ ರಸ್ತೆ ತಲುಪಿದ ಬಳಿಕ ಅಲ್ಲಿಂದ ರಸ್ತೆ ಮಾರ್ಗವಾಗಿ ತಮ್ಮ ಪ್ರವಾಸ ಮುಂದುವರೆಸಲಿದ್ದಾರೆ. ಪ್ರವಾಸ ಮುಗಿಸಿ ಇಂದು ರಾತ್ರಿ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಸಿಎಂ ಭೇಟಿ ಹಿನ್ನೆಲೆ ಕ್ಷೇತ್ರಾದ್ಯಂತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jun 07, 2026 09:17 AM
Loading...
Unable to load recommendations.
Follow Us
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More