ಜೀ5 ಅಲ್ಲಿ ಬರ್ತಿದೆ ಹೊಸ ವೆಬ್ ಸರಣಿ; ಡಾಲಿ ನಿರ್ಮಾಣ

Updated on: Mar 16, 2026 | 8:32 AM

ಕನ್ನಡದ ಪಾಲಿಗೆ ವೆಬ್ ಸರಣಿ ಹೊಸದೇ. ಆದರೆ, ಈಗ ಡಾಲಿ ಪಿಕ್ಚರ್ಸ್ ಅವರು ಹೊಸ ವೆಬ್ ಸರಣಿ ತರುತ್ತಿದ್ದಾರೆ. ಹಲವು ವೆಬ್ ಸರಣಿಗಳನ್ನು ನಿರ್ಮಿಸೋ ಕೆಲಸವನ್ನು ಅವರು ಮಾಡುತ್ತಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. 

ಡಾಲಿ ಧನಂಜಯ್ ಅವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ನಟನೆಯ ಜೊತೆಗೆ ಸಿನಿಮಾ ನಿರ್ಮಾಣ ಕೆಲಸಗಳಲ್ಲೂ ಅವರು ತೊಡಗಿಕೊಂಡಿದ್ದು, ಹೊಸ ಮುಖಗಳಿಗೆ ಮಣೆ ಹಾಕುತ್ತಿದ್ದಾರೆ. ಈಗ ಅವರ ಕಡೆಯಿಂದ ಹೊಸ ಸುದ್ದಿ ಒಂದು ಸಿಗುವ ಸೂಚನೆ ಸಿಕ್ಕಿದೆ. ಜೀ5 ಅಲ್ಲಿ ಕನ್ನಡದ ಹೊಸ ಸರಣಿ ಬರುತ್ತಿದ್ದು, ಇದಕ್ಕೆ ಡಾಲಿ ನಿರ್ಮಾಣ ಇದೆ ಎನ್ನಲಾಗಿದೆ. ಶೀಘ್ರವೇ ಈ ಬಗ್ಗೆ ಘೋಷಣೆ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ಹೆಗಡೆ ದುಗ್ಗುಮನೆ

ರಾಜೇಶ್ ಹೆಗಡೆ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More