ಧನಂಜಯ ನಟನೆಯ ‘ಹೊಯ್ಸಳ’ ಚಿತ್ರಕ್ಕೆ ನೆರವೇರಿತು ಮುಹೂರ್ತ; ಯಾರೆಲ್ಲಾ ಭಾಗಿ?
ನಿರ್ದೇಶಕ ಸಂತೋಷ್ ಆನಂದ್ ರಾಮ್, ‘ಕೆಜಿಎಫ್: ಚಾಪ್ಟರ್ 2’ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಈ ಮುಹೂರ್ತ ಕಾರ್ಯಕ್ರಮಕ್ಕೆ ಆಗಮಿಸಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.
ಧನಂಜಯ ಅವರು (Dhananjay) ಸ್ಯಾಂಡಲ್ವುಡ್ನಲ್ಲಿ ಸಾಕಷ್ಟು ಬ್ಯುಸಿ ಇದ್ದಾರೆ. ರೌಡಿ ಆಗಿ, ಖಡಕ್ ಪೊಲೀಸ್ ಆಗಿ, ಮಿಡಲ್ ಕ್ಲಾಸ್ ಹುಡುಗನಾಗಿ ಭಿನ್ನ ಭಿನ್ನ ಅವತಾರಗಳನ್ನು ತಾಳಿದ್ದಾರೆ. ಈಗ ‘ಹೊಯ್ಸಳ’ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ನೆರವೇರಿದೆ. ನಿರ್ದೇಶಕ ಸಂತೋಷ್ ಆನಂದ್ ರಾಮ್ (Santosh Anandram), ‘ಕೆಜಿಎಫ್: ಚಾಪ್ಟರ್ 2’ನಿರ್ಮಾಪಕ ವಿಜಯ್ ಕಿರಗಂದೂರು ಮೊದಲಾದವರು ಈ ಮುಹೂರ್ತ ಕಾರ್ಯಕ್ರಮಕ್ಕೆ ಆಗಮಿಸಿ, ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ಚಿತ್ರದಲ್ಲಿ ಧನಂಜಯಗೆ ಜೋಡಿಯಾಗಿ ಅಮೃತಾ ಅಯ್ಯಂಗಾರ್ (Amrutha Iyengar) ಕಾಣಿಸಿಕೊಳ್ಳುತ್ತಿದ್ದಾರೆ. ‘ಬಡವ ರಾಸ್ಕಲ್’ ಸಿನಿಮಾದಲ್ಲಿ ಈ ಜೋಡಿ ಮೋಡಿ ಮಾಡಿತ್ತು. ಹೊಸ ಸಿನಿಮಾದಲ್ಲಿ ಇವರು ಮತ್ತೆ ಒಂದಾಗಿರುವುದು ಕುತೂಹಲ ಮೂಡಿಸಿದೆ. ವಿಜಯ್ ಎನ್. ಅವರು ಈ ಸಿನಿಮಾಗೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಇದನ್ನೂ ಓದಿ: KGF Chapter 2: ‘ಕೆಜಿಎಫ್ ಚಾಪ್ಟರ್ 2’ ಯಶಸ್ಸಿನ ಬಗ್ಗೆ ಡಾಲಿ ಧನಂಜಯ್ ಹೇಳಿದ್ದೇನು?
‘ಸ್ಪೆಷಲ್ ರೋಲ್ ಅಂತ ಕರ್ಕೊಂಡು ಹೋದ್ರು, ಚಡ್ಡಿಯಲ್ಲೆಲ್ಲ ನಿಲ್ಸಿದ್ರು’; ಧನಂಜಯ
Published on: Apr 23, 2022 08:45 AM
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

