AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ‘ಹೊಯ್ಸಳ’ ಹವಾ; ಡಾಲಿ ಧನಂಜಯ್​ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್​

ಬೆಳಗಾವಿಯಲ್ಲಿ ‘ಹೊಯ್ಸಳ’ ಹವಾ; ಡಾಲಿ ಧನಂಜಯ್​ ಜೊತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್​

ಮದನ್​ ಕುಮಾರ್​
|

Updated on:Mar 26, 2023 | 4:13 PM

Share

ಡಾಲಿ ಧನಂಜಯ್​ ಅಭಿನಯದ ‘ಹೊಯ್ಸಳ’ ಸಿನಿಮಾ ಕ್ರೇಜ್​ ಸೃಷ್ಟಿ ಮಾಡಿದೆ. ಮಾರ್ಚ್​ 30ರಂದು ಈ ಚಿತ್ರ ಬಿಡುಗಡೆ ಆಗಲಿದೆ.

ನಟ ಡಾಲಿ ಧನಂಜಯ್​ (Daali Dhananjay) ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಎಲ್ಲೇ ಹೋದರೂ ಅವರ ಜೊತೆ ಫೋಟೋ ತೆಗೆಸಿಕೊಳ್ಳಲು ಫ್ಯಾನ್ಸ್​ ಮುಗಿಬೀಳುತ್ತಾರೆ. ಬೆಳಗಾವಿಯಲ್ಲೂ ಹಾಗೇ ಆಗಿದೆ. ‘ಹೊಯ್ಸಳ’ ಸಿನಿಮಾದ ಪ್ರಚಾರಕ್ಕಾಗಿ ಡಾಲಿ ಧನಂಜಯ್​ ಅವರು ಬೆಳಗಾವಿಗೆ (Belagavi) ತೆರಳಿದ್ದಾರೆ. ಈ ವೇಳೆ ಅವರನ್ನು ನೋಡಲು ಸಾಕಷ್ಟು ಅಭಿಮಾನಿಗಳು ನೆರೆದಿದ್ದಾರೆ. ತಮ್ಮ ನೆಚ್ಚಿನ ನಟನ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಎಲ್ಲರೂ ಮುಗಿಬಿದ್ದಿದ್ದಾರೆ. ಟ್ರೇಲರ್​ ಮೂಲಕ ‘ಹೊಯ್ಸಳ’ ಸಿನಿಮಾ (Hoysala Movie) ಕ್ರೇಜ್​ ಸೃಷ್ಟಿ ಮಾಡಿದೆ. ಮಾರ್ಚ್​ 30ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಅಮೃತಾ ಅಯ್ಯಂಗಾರ್​ ಮತ್ತು ಡಾಲಿ ಧನಂಜಯ್​ ಅವರು ಈ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published on: Mar 26, 2023 04:13 PM

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More