Dhananjay: ‘ಯಾಕ್ರಿ ಹೊಟ್ಟೆ ಬಿಟ್ಕೊಂಡು ಓಡಾಡ್ತಾ ಇದೀರಿ?’: ಡಾಲಿ ಧನಂಜಯ್​ಗೆ ಸುದೀಪ್​ ನೇರ ಪ್ರಶ್ನೆ

Updated on: Mar 21, 2023 | 4:01 PM

‘ಹೊಯ್ಸಳ’ ಟ್ರೇಲರ್​ ಬಿಡುಗಡೆ ಸಮಾರಂಭದಲ್ಲಿ ಡಾಲಿ ಧನಂಜಯ್​ ಅವರು ಕಿಚ್ಚ ಸುದೀಪ್​ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಒಂದು ಘಟನೆಯನ್ನು ಅವರು ನೆನಪಿಸಿಕೊಂಡಿದ್ದಾರೆ.

ಡಾಲಿ ಧನಂಜಯ್​ (Daali Dhananjay) ಅವರಿಗೆ ಚಿತ್ರರಂಗದಲ್ಲಿ ಎಲ್ಲರ ಜೊತೆ ಒಳ್ಳೆಯ ಒಡನಾಟ ಇದೆ. ಈಗ ಅವರು ನಟಿಸಿರುವ ‘ಹೊಯ್ಸಳ’ ಸಿನಿಮಾ (Hoysala Movie) ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರದ ಟ್ರೇಲರ್​ ರಿಲೀಸ್​ ಕಾರ್ಯಕ್ರಮ ಸೋಮವಾರ (ಮಾರ್ಚ್​ 20) ಅದ್ದೂರಿಯಾಗಿ ನಡೆಯಿತು. ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್​ (Kichcha Sudeep) ಅವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ವೇದಿಕೆಯಲ್ಲಿ ಸುದೀಪ್​ ಬಗ್ಗೆ ಡಾಲಿ ಮಾತನಾಡಿದರು. ‘ಹೆಡ್ ಬುಷ್’ ಚಿತ್ರದ ಸಂದರ್ಭದಲ್ಲಿ ‘ಯಾಕ್ರಿ ಹೀಗೆ ಹೊಟ್ಟೆ ಬಿಟ್ಕೊಂಡು ಓಡಾಡ್ತಾ ಇದೀರಾ’ ಅಂತ ಧನಂಜಯ್​ಗೆ ಸುದೀಪ್​ ಕೇಳಿದ್ದರು. ಆ ಮೂಲಕ ಫಿಟ್ನೆಸ್​ ಬಗ್ಗೆ ಕಾಳಜಿ ವಹಿಸುವಂತೆ ಅವರು ಸಲಹೆ ನೀಡಿದ್ದರು. ಆ ಘಟನೆಯನ್ನು ಧನಂಜಯ್​ ಅವರು ಈಗ ನೆನಪಿಸಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More