ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಡಾಲಿ ಧನಂಜಯ ಅವರ ಮದುವೆ ತುಂಬ ಸಡಗರದಿಂದ ನಡೆದಿದೆ. ಸಾವಿರಾರು ಅಭಿಮಾನಿಗಳು, ಅನೇಕ ಗಣ್ಯರು, ಚಿತ್ರರಂಗದ ಸೆಲೆಬ್ರಿಟಿಗಳು ಮೈಸೂರಿಗೆ ಬಂದು ಧನಂಜಯ ಮತ್ತು ಧನ್ಯತಾ ಅವರನ್ನು ಹರಸಿದ್ದಾರೆ. ಯಾವುದೇ ವಿಘ್ನಗಳಿಲ್ಲದೇ ವಿವಾಹ ನಡೆದಿದ್ದಕ್ಕೆ ಡಾಲಿ ಧನಂಜಯ ಅವರು ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಅವರ ಮೊದಲ ಪ್ರತಿಕ್ರಿಯೆ ಇಲ್ಲಿದೆ.
ಮದುವೆ ಮುಗಿದ ನಂತರ ಡಾಲಿ ಧನಂಜಯ ಅವರು ಮೊದಲ ಬಾರಿಗೆ ಮಾಧ್ಯಮಗಳ ಎದುರಲ್ಲಿ ಮಾತನಾಡಿದ್ದಾರೆ. ‘ಎಲ್ಲರಿಗೂ ಧನ್ಯವಾದಗಳು. ಸಣ್ಣ-ಪುಟ್ಟ ತಪ್ಪುಗಳು ಆಗಿದ್ದರೆ ಕ್ಷಮೆ ಇರಲಿ. ಶಾಂತಿಯುತವಾಗಿ ಸಮಾರಂಭ ನಡೆಯಿತು. ಅಭಿಮಾನಿಗಳಿಗೆ ವಿಶೇಷ ಧನ್ಯವಾದ. ಮನೆಯವರು ತುಂಬ ಖುಷಿ ಆಗಿದ್ದಾರೆ. ಸಾವಿರಾರು ಜನರು ಬಂದು ಹರಸಿದ್ದು ಖುಷಿ. ಅಭಿಮಾನಿಗಳ ಪ್ರೀತಿಗೆ ಹೇಗೆ ಪ್ರತಿಕ್ರಿಯಿಸಬೇಕು ಅಂತ ಗೊತ್ತಾಗಲ್ಲ. ಆ ಪ್ರೀತಿಯನ್ನು ಉಳಿಸಿಕೊಳ್ಳುವ ರೀತಿ ನಾವು ಕೆಲಸ ಮಾಡಬೇಕು’ ಎಂದು ಡಾಲಿ ಧನಂಜಯ ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

