ಯಶ್ ಕೈ ಸೇರಿತು ಧನಂಜಯ ಮದುವೆ ಆಮಂತ್ರಣ; ಟಾಕ್ಸಿಕ್ ಸೆಟ್​ನಲ್ಲಿ ಡಾಲಿ ಭೇಟಿ

Updated on: Feb 03, 2025 | 8:29 PM

ನಟ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣದಲ್ಲ ತೊಡಗಿಕೊಂಡಿದ್ದಾರೆ. ಶೂಟಿಂಗ್​ ಸೆಟ್​ಗೆ ಭೇಟಿ ನೀಡಿದ ಡಾಲಿ ಧನಂಜಯ ಅವರು ಮದುವೆ ಆಹ್ವಾನ ಪತ್ರಿಕೆಯನ್ನು ನೀಡಿದ್ದಾರೆ. ಆ ಸಂದರ್ಭದ ಫೋಟೋಗಳು ಇಲ್ಲಿವೆ. ಮದುವೆ ಸಲುವಾಗಿ ಧನಂಜಯ ಅವರು ಸಿನಿಮಾ ಕೆಲಸಗಳಿಗೆ ಸದ್ಯಕ್ಕೆ ಬ್ರೇಕ್ ನೀಡಿದ್ದಾರೆ.

‘ರಾಕಿಂಗ್ ಸ್ಟಾರ್​’ ಯಶ್ ಅವರು ಈಗ ‘ಟಾಕ್ಸಿಕ್’ ಚಿತ್ರದ ಶೂಟಿಂಗ್​ನಲ್ಲಿ ತೊಡಗಿಕೊಂಡಿದ್ದಾರೆ. ಆ ಸಿನಿಮಾದ ಚಿತ್ರೀಕರಣದ ಸೆಟ್​ಗೆ ನಟ ಡಾಲಿ ಧನಂಜಯ ಅವರು ಭೇಟಿ ನೀಡಿದ್ದಾರೆ. ತಮ್ಮ ವಿವಾಹದ ಆಹ್ವಾನ ಪತ್ರಿಕೆಯನ್ನು ಯಶ್​ಗೆ ನೀಡಿದ್ದಾರೆ. ಆ ಸಂದರ್ಭದ ಫೋಟೋಸ್ ಇಲ್ಲಿವೆ. ಮದುವೆ ಸಲುವಾಗಿ ಧನಂಜಯ್ ಅವರು ಸಿನಿಮಾ ಕೆಲಸಗಳಿಂದ ಸದ್ಯಕ್ಕೆ ಬ್ರೇಕ್ ಪಡೆದಿದ್ದಾರೆ. ಮೈಸೂರಿನಲ್ಲಿ ಫೆಬ್ರವರಿ 15 ಮತ್ತು 16ರಂದು ಡಾಲಿ ಮದುವೆ ನೆರವೇರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More